LatestLeading NewsMain PostNational

ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ; ಮುಂದಲೆ ಹಿಡಿದು ಎಳೆದಾಡಿದ ವಿದ್ಯಾರ್ಥಿನಿಯರು

ಚೆನ್ನೈ: ತಮಿಳುನಾಡಿನ ದೇವಸ್ಥಾನಗಳ ನಗರಿ ಎಂದೇ ಕರೆಯುವ ಮಧುರೈನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿಯರ ನಡುವೆ ಮಾರಾಮಾರಿ ನಡೆದಿದ್ದು, ಬಸ್ ನಿಲ್ದಾಣದಲ್ಲೇ ಮುಂದಲೆ ಹಿಡಿದು ಹೊಡೆದಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಜನನಿಬಿಡವಾದ ಮಧುರೈ ಪೆರಿಯಾರ್ ಬಸ್ ನಿಲ್ದಾಣದಲ್ಲಿ ನಡೆದ ಈ ಗಲಾಟೆಯ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ಷೇಪ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಪ್ರೇಯಸಿಯ ಸಹೋದರನನ್ನು ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ

Periyar bus stop (1)

ವಿದ್ಯಾರ್ಥಿನಿಯರ ಎರಡು ಗುಂಪುಗಳ ನಡುವೆ ಕಳೆದ ಮೂರ್ನಾಲ್ಕು ದಿನಗಳಿಂದಲೂ ಮಾತಿನ ಚಕಮಕಿ ನಡೆಯುತ್ತಿತ್ತು. ನಿನ್ನೆ ಮಾತಿನ ಚಕಮಕಿ ಹಿಂಸಾತ್ಮಕ ರೂಪಕ್ಕೆ ತಿರುಗಿದ್ದು, ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಶುರುವಾಗಿದೆ. ವಿದ್ಯಾರ್ಥಿಗಳು ಪರಸ್ಪರ ಮುಂದಲೆ ಹಿಡಿದು ಎಳೆದಾಡಿಕೊಂಡಿದ್ದಾರೆ. ಒಬ್ಬರನ್ನೊಬ್ಬರು ಜಾಡಿಸಿ ಒದ್ದು, ಥಳಿಸಿದ್ದಾರೆ. ಗಲಾಟೆ ನಡೆಯುತ್ತಿದ್ದರೂ ಸಾರ್ವಜನಿಕರು ಮೂಕ ಪ್ರೇಕ್ಷಕರಾಗಿದ್ದರೇ ಹೊರತು, ಯಾರೊಬ್ಬರೂ ಬಿಡಿಸುವ ಪ್ರಯತ್ನಕ್ಕೆ ಮುಂದಾಗಿಲ್ಲವೆಂದು ವೀಡಿಯೋ ಹೇಳುತ್ತಿದೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಆರೋಪ – ಐಎಎಸ್ ಅಧಿಕಾರಿ ವಿರುದ್ಧ ಕೇಸ್ ದಾಖಲು

ಕಳೆದ ವಾರ ತಮಿಳುನಾಡಿನ ಸಾರ್ವಜನಿಕ ಪ್ರದೇಶದಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡ 3ನೇ ಘಟನೆ ಇದಾಗಿದೆ. ಇದಕ್ಕೂ ಮೊದಲು, ಚೆನ್ನೈನ ಬಸ್ ನಿಲ್ದಾಣದಲ್ಲಿ ಮಹಿಳಾ ಕಾಲೇಜು ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದರು.

Leave a Reply

Your email address will not be published.

Back to top button