– ಕೋರ್ಟ್‌ಗೆ ಶರಣಾದ ಪ್ರಮುಖ ಆರೋಪಿ
– ಹಿಂದೆಯೂ ಪೋಕ್ಸೋ ಕೇಸ್‌ಲ್ಲಿ ಜೈಲು ಸೇರಿದ್ದ ಕಾಮುಕ
ಚಿಕ್ಕಮಗಳೂರು: ಅಪ್ರಾಪ್ತೆಗೆ ಬ್ಲ್ಯಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಐವರು ಆರೋಪಿಗಳನ್ನು ಚಿಕ್ಕಮಗಳೂರಿನ (Chikkamagaluru) ಗೋಣಿಬೀಡು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ನ್ಯಾಯಾಲಯಕ್ಕೆ (Court) ಶರಣಾಗಿದ್ದಾನೆ. ಈತ ಈ ಹಿಂದೆಯೂ ಪೋಕ್ಸೋ ಪ್ರಕರಣದಲ್ಲಿ (Pocso Case) ಜೈಲು ಸೇರಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್ – ವೀಡಿಯೋ ಹರಿಬಿಟ್ಟು ವಿಕೃತಿ
ಫೋಟೋ ಒಂದನ್ನು ತೋರಿಸಿ ಅಪ್ರಾಪ್ತೆಗೆ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ 5 ಮಂದಿ ವಿರುದ್ಧ ಗೋಣಿಬೀಡು ಠಾಣೆಗೆ ಆಕೆ ದೂರು ನೀಡಿದ್ದಳು. ಇನ್ನೂ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಇತ್ತೀಚೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಳು.
ಸ್ಥಳಕ್ಕೆ ಎಸ್ಪಿ ಜಿತೇಂದ್ರ ಕುಮಾರ್ ದಯಾಮ್ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಸಿಪಿಐ ರಾಜಶೇಖರ್, ಪಿಎಸ್‌ಐ ಶ್ರೀನಾಥ್ ರೆಡ್ಡಿಯವರಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ರೌಡಿಶೀಟರ್ ಆವಲಹಳ್ಳಿ ಮಂಜೇಶ್ ಹತ್ಯೆ ಪ್ರಕರಣ – ಠಾಣೆಗೆ ಹಾಜರಾದ ಐವರು ವಶಕ್ಕೆ
