ಹಾಸನ: ಕಾರಿನಲ್ಲಿ (Car) ಎಂಡಿಎಂ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಐವರನ್ನು ಹಾಸನ (Hassan) ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಪರ್ವೀಜ್ (29), ಸುಹೇಲ್ (24), ಅಬ್ದುಲ್ ಯಾಸಿನ್ (20), ಇಬ್ರತ್ ಖಾನ್ (24) ಮತ್ತು ಸೈಯದ್ ಯೂಸಫ್ (23) ಎಂದು ಗುರುತಿಸಲಾಗಿದೆ. ಇದರಲ್ಲಿ ನಾಲ್ವರು ಶಿವಮೊಗ್ಗ ಮೂಲದವರು, ಓರ್ವ ಹಾಸನ ಮೂಲದವನು ಎಂದು ತಿಳಿದು ಬಂದಿದೆ. ಇದನ್ನೂ ಓದಿ:ಮಂಗಳೂರು| ಮಾದಕವಸ್ತು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ
ಹಾಸನದ ರಾಜ್‍ಕುಮಾರ್ ನಗರದ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಪರಿಶೀಲನೆ ನಡೆಸಿದಾಗ ಕಾರಿನಲ್ಲಿ 2 ಲಕ್ಷ ರೂ.ಗೂ ಅಧಿಕ ಮೌಲ್ಯದ 40 ಗ್ರಾಂ ಮಾದಕವಸ್ತು ಪತ್ತೆಯಾಗಿತ್ತು. ಕೃತ್ಯಕ್ಕೆ ಬಳಸಿದ ಕಾರು, 40 ಗ್ರಾಂ ಎಂಡಿಎಂನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪೆನ್‍ಷನ್‍ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 4 ಕಾರುಗಳಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಇಸ್ಲಾಂಗೆ ಮತಾಂತರಕ್ಕೆ ಬ್ಲ್ಯಾಕ್‌ಮೇಲ್

