ಬೆಂಗಳೂರು: ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈರುತ್ಯ ವಿಭಾಗದ ಡಿಸಿಪಿ ಅನಿತಾ ಹದ್ದಣವರ್ ಮಾಹಿತಿ ನೀಡಿದ್ದಾರೆ.
ಸಂತ್ರಸ್ತೆ ನೀಡಿರುವ ದೂರಿನಲ್ಲಿ ಆರೋಪಿ ಸೋಮಶೇಖರ್ ಸೇರಿ ನಾಲ್ವರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿಲಾಗಿದೆ.
ಸಂತ್ರಸ್ತೆಯನ್ನು ಬರ್ತ್‌ಡೇ ಪಾರ್ಟಿ ನೆಪದಲ್ಲಿ ಸೋಮಶೇಖರ್ ಕರೆಸಿಕೊಂಡಿದ್ದಾನೆ. ಹೋಟೆಲ್‌ನಲ್ಲಿ ಪಾರ್ಟಿ ಇದೆ ಎಂದು ಹೇಳಿ ಕರೆಸಿಕೊಂಡಿದ್ದ ಆತ, ಬಳಿಕ ಸ್ನೇಹಿತರೊಂದಿಗೆ ಮನೆಗೆ ಹೋಗೋಣ ಎಂದು ಹೇಳಿದ್ದಾನೆ. ಅದಾದ ಬಳಿಕ ಅಂಬರೀಶ್ ತನ್ನ ಸ್ನೇಹಿತರ ಮನೆಗೆ ಕರೆದುಕೊಂಡು ಹೋಗಿ, ಅಲ್ಲಿಂದ ಹೋಟೆಲ್‌ಗೆ ಪಾರ್ಟಿಗೆ ಹೋಗೋಣ ಎಂದು ಹೇಳಿದ್ದಾನೆ.ಇದನ್ನೂ ಓದಿ: 80 ಅಡಿಗೆ ಕುಸಿದ ಕೆಆರ್‌ಎಸ್ ನೀರು – ಜಲಾಶಯಕ್ಕೆ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ಭೇಟಿ
ಈ ವೇಳೆ ಕೂಲ್ ಡ್ರಿಂಕ್ಸ್‌ನಲ್ಲಿ ಮತ್ತು ಬರುವ ವಸ್ತು ಬೆರೆಸಿ ಕುಡಿಸಿದ್ದಾರೆ. ತಾನು ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ಐವರ ಪೈಕಿ ಒಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ. ಅಂಬರೀಶ್ ಎಂಬಾತ ಅತ್ಯಾಚಾರ ಎಸಗಿದ್ದು, ಘಟನೆ ನಡೆಯುವ ವೇಳೆ ಉಳಿದವರು ಹಾಲ್‌ನಲ್ಲಿ ಇದ್ದು ನೋಡುತ್ತಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಘಟನೆಗೆ ಸಂಬಂಧಿಸಿದ ಅಂಬರೀಶ್, ಸೋಮಶೇಖರ್ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ತಲಘಟ್ಟಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಇದನ್ನೂ ಓದಿ: ಬೆಂಗಳೂರಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್‌ಗೆ ಯತ್ನ – ಐವರು ಅರೆಸ್ಟ್
