ರಾಮನಗರ: ಗೋ ಸಾಗಾಟದ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿ ಪುನೀತ್ ಕೆರೆಹಳ್ಳಿ (Puneeth Kerehalli) ಸೇರಿ ಐವರನ್ನು ಸಾತನೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 31 ರಂದು ಕನಕಪುರ (Kanakapura) ತಾಲೂಕಿನ ಸಾತನೂರು ಬಳಿ ಅಕ್ರಮ ಗೋ ಸಾಗಣಿಕೆ ನಡೆಯುತ್ತಿತ್ತು. ಈ ವೇಳೆ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಕ್ಯಾಂಟರ್ ತಡೆದು ಜಾನುವಾರು ರಕ್ಷಣೆ ಮಾಡಿದ್ದರು. ಈ ವೇಳೆ ಕ್ಯಾಂಟರ್‌ನಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದರು. ಮೃತನನ್ನು ಮಂಡ್ಯ ಮೂಲದ ಇದ್ರಿಷ್ ಪಾಷಾ ಎಂದು ಗುರುತಿಸಲಾಗಿತ್ತು. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು.
ಪುನೀತ್ ಕೆರೆಹಳ್ಳಿ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 34 ರ ಅಡಿ ಕೇಸ್ ದಾಖಲಾಗಿತ್ತು. ಆದರೆ ಪುನೀತ್ ಕೆರೆಹಳ್ಳಿ ಹಾಗೂ ಆತನ ತಂಡ ಕಳೆದ ಐದು ದಿನದಿಂದ ತಲೆ ಮರೆಸಿಕೊಂಡಿದ್ದರು. ಆದರೆ ಪ್ರಕರಣದ ತನಿಖೆ ಆರಂಭಿಸಿದ್ದ ಸಾತನೂರು ಪೊಲೀಸರು ಪುನೀತ್ ಕೆರೆಹಳ್ಳಿ ಮತ್ತು ಆತನ ತಂಡವನ್ನು ರಾಜಸ್ಥಾನದಲ್ಲಿ (Rajastan) ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮುಸ್ಲಿಮರನ್ನ ಟಾರ್ಗೆಟ್ ಮಾಡಿ ಹಿಂಸಾಚಾರ – ಇಸ್ಲಾಮಿಕ್ ರಾಷ್ಟ್ರಗಳ ಆರೋಪಕ್ಕೆ ಭಾರತ ಕಿಡಿ