ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಐವರು ಬಲಿಯಾಗಿದ್ದಾರೆ. ಮಳೆಹಾನಿ ಪರಿಸ್ಥಿತಿ ವೀಕ್ಷಣೆಗೆ ಭೇಟಿ ಕೊಟ್ಟಿದ್ದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao), ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಮಳೆ ಹಾನಿ ಪರಿಸ್ಥಿತಿ ವೀಕ್ಷಣೆಗೆ ಜಿಲ್ಲೆಗೆ ಆಗಮಿಸಿದ ಗುಂಡೂರಾವ್, ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದ ಮೊಂಟೆಪದವು ಸೇರಿದಂತೆ ಹಲವು ಭಾಗಗಳಿಗೆ ಭೇಟಿ ನೀಡಿದರು. ಉಳ್ಳಾಲ ತಾಲೂಕಿನಾದ್ಯಾಂತ ಅಪಾರ ಹಾನಿಯಾಗಿದ್ದು, ಇಂದು ರಾತ್ರಿ ಮಂಗಳೂರಿನಲ್ಲಿ ಸಚಿವರು ವಾಸ್ತವ್ಯ ಹೂಡಲಿದ್ದಾರೆ. ಇದನ್ನೂ ಓದಿ: ಮಂಗಳೂರಲ್ಲಿ ವರುಣಾರ್ಭಟ; ಮಳೆಗೆ 6 ಮಂದಿ ಬಲಿ
ಬೆಳಗ್ಗೆ 8 ಗಂಟೆಗೆ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಇದೇ ವೇಳೆ, ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಭೆ ನಡೆಸಲಿದ್ದಾರೆ.
ಮಂಗಳೂರು (Mangaluru Rains) ಹೊರವಲಯದ ದೇರಳಕಟ್ಟೆಯ ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತವಾಗಿ ಮನೆ ಧರಶಾಹಿಯಾಗಿ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದರು. ದುರಂತದಲ್ಲಿ ಮೂವರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಓಡಿನ್ಮಾಳ ಗ್ರಾಮದ ಕುಮ್ಮಂಜ ಎಂಬಲ್ಲಿ ಘಟನೆ ವಿದ್ಯುತ್ ಶಾಕ್‌ನಿಂದ ಲೈನ್‌ಮನ್ ವೀರೇಶ್ ಜೈನ್ (27) ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮಲೆನಾಡು ಭಾಗದಲ್ಲಿ ಭಾರೀ ಮಳೆ – ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ
ಮಂಗಳೂರಿನಲ್ಲಿ ಮಳೆಯ ಜೊತೆ ಕಡಲಬ್ಬರ ಜೋರಾಗಿದೆ. ಪರಿಣಾಮ ನಾಡದೋಣಿ ಮಗುಚಿ ಇಬ್ಬರು ನೀರುಪಾಲಾಗಿರುವ ಘಟನೆ ತೋಟಬೆಂಗ್ರೆ ಅಳಿವೆ ಬಾಗಿಲು ಎಂಬಲ್ಲಿ ನಡೆದಿದೆ.