Uttar Pradesh | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಬೆಂಕಿ – ಐವರು ಸಜೀವ ದಹನ

Public TV
1 Min Read
Uttar Pradesh Bulandshahr Car Accident

– ಮದುವೆ ಮುಗಿಸಿ ಬರುತ್ತಿದ್ದ ವೇಳೆ ಘಟನೆ

ಲಕ್ನೋ: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮದುವೆ ಮುಗಿಸಿ ಬರುತ್ತಿದ್ದ ಐವರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬುಲಂದ್‌ಶಹರ್‌ (Bulandshahr) ಜಿಲ್ಲೆಯಲ್ಲಿ ನಡೆದಿದೆ.

ಬದೌನ್‌ನಲ್ಲಿ ನಡೆದ ಮದುವೆ ಮುಗಿಸಿ ದೆಹಲಿಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದ ಹಿನ್ನೆಲೆ ಸ್ವಿಫ್ಟ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಕಾರು ಲಾಕ್ ಆದ ಕಾರಣ ಹೊರಗೆ ಬರಲಾರದೇ ಐವರು ಸಜೀವ ದಹನವಾಗಿದ್ದಾರೆ. ಇದನ್ನೂ ಓದಿ: `ಥಗ್‌ಲೈಫ್’ ರಿಲೀಸ್‌ಗೆ ಸುಪ್ರೀಂ ಗ್ರೀನ್ ಸಿಗ್ನಲ್ – ಕನ್ನಡ ಪರ ಸಂಘಟನೆಯ ಪ್ರಮುಖರಿಗೆ ಪೊಲೀಸರಿಂದ ನೋಟಿಸ್

ಮುಂಜಾನೆ 5:50ರ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೈಕ್‌ಗೆ ಕ್ಯಾಂಟರ್ ಡಿಕ್ಕಿ – ಕೆಲಸಕ್ಕೆ ತೆರಳುತ್ತಿದ್ದ ಸ್ನೇಹಿತರು ಬೈಕ್ ಅಪಘಾತದಲ್ಲಿ ದುರ್ಮರಣ

Share This Article