ಬೆಂಗಳೂರು: ಪ್ರಧಾನಿ ಮೋದಿಯವರೇ (Narendra Modi) ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ (Congress) ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು (Guarantee Scheme) ಜಾರಿ ಮಾಡಿದೆ. ನಿಮ್ಮ ಮಾತು ಸುಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವ್ಯಂಗ್ಯವಾಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಯುವನಿಧಿ (Yuva Nidhi) ಯೋಜನೆಯ ನೋಂದಣಿ ಪ್ರಕ್ರಿಯೆಯ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಯುವನಿಧಿ ಜೊತೆಗೆ ಉಚಿತ ತರಬೇತಿ, ಅರ್ಜಿ ಶುಲ್ಕವೂ ಉಚಿತ. ರಾಜ್ಯದ ಜನರಿಗೆ ಇದು ಮುಟ್ಟಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದ ಮೋದಿಯವರೇ ನೀವು ಉದ್ಯೋಗ ಸೃಷ್ಟಿಸಿದ್ರಾ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಅಂದರೆ ಇಷ್ಟೊತ್ತಿಗೆ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಎಲ್ಲಿ ಸೃಷ್ಟಿಯಾಯ್ತು ಮೋದಿಯವರೇ? ನೀವು ಮಾತಿಗೆ ತಪ್ಪಿದ ಮೋದಿ ಎಂದು ಟೀಕಿಸಿದರು. ಇದನ್ನೂ ಓದಿ: ಏಪ್ರಿಲ್ ವೇಳೆಗೆ ಬಿಎಂಟಿಸಿಗೆ 1400 ಎಲೆಕ್ಟ್ರಿಕ್ ಬಸ್: ಸಿದ್ದರಾಮಯ್ಯ
Advertisement
Advertisement
ಭಾರತದ ಇತಿಹಾಸದಲ್ಲಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಇವತ್ತಿನವರೆಗೂ ಬಂದಿಲ್ಲ. ಮೋದಿಯವರೇನು ಆರ್ಥಿಕ ತಜ್ಞರಾ? ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಭಾಷಣ ಮಾಡಿದ್ದರು. ಈಗ ಐದೂ ಯೋಜನೆ ಜಾರಿಯಾಗಿ ರಾಜ್ಯ ಆರ್ಥಿಕವಾಗಿ ಸದೃಢವಾಗಿದೆ ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: ರಾಮ ನನ್ನ ಹೃದಯದಲ್ಲಿದ್ದಾನೆ, ಅದನ್ನು ತೋರಿಸಿಕೊಳ್ಳುವ ಅಗತ್ಯವಿಲ್ಲ: ಕಪಿಲ್ ಸಿಬಲ್
Advertisement
ವಿವೇಕಾನಂದ ಜಯಂತಿಯಂದು ಲಕ್ಷಾಂತರ ಯುವಕ ಯುವತಿಯರ ಸಮ್ಮುಖದಲ್ಲಿ ಯುವನಿಧಿಯನ್ನು ನೇರವಾಗಿ ಅರ್ಹರ ಖಾತೆಗೆ ಜಮೆ ಮಾಡುವ ಕಾರ್ಯಕ್ರಮ ನಡೆಸುತ್ತೇವೆ. ಮಾತು ತಪ್ಪಿದ ಮೋದಿಯವರೇ ನಿಮ್ಮ ಮಾತು ಏನಾಯ್ತು? ರಾಜ್ಯದ ಯುವ ಸಮೂಹ ನಿಮ್ಮನ್ನು ಪ್ರಶ್ನಿಸುತ್ತಿದೆ ಎಂದರು. ಅಲ್ಲದೇ ಈ ಸಂದರ್ಭ ರಾಜ್ಯದಲ್ಲಿ ಖಾಲಿ ಇರುವ ಉದ್ಯೋಗಗಳನ್ನೂ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕಮಲ ಉದುರಿ ಹೋಯ್ತು, ತೆನೆ ಹೊತ್ತ ಮಹಿಳೆ ತೆನೆ ಎಸೆದು ಓಡಿಯಾಯಿತು: ಡಿಕೆಶಿ ಕವನ ವಾಚನ
Advertisement
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣಪ್ರಕಾಶ್ ಪಾಟೀಲ್ ಸೇರಿ ಹಲವು ಸಚಿವರು ಭಾಗಿಯಾಗಿದ್ದರು. ಇದನ್ನೂ ಓದಿ: ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ