ವಿಜಯಪುರ: ಲಾರಿ ಹಾಗೂ ಬುಲೆರೋ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟಿರುವ ದಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ.
ಜಿಲ್ಲೆಯ ಹೊನಗನಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಬೊಲೆರೋದಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಸಾವನ್ನಪ್ಪಿದ 5 ಜನರು ಮಹಾರಾಷ್ಟ್ರ ರಾಜ್ಯದ ಕಾರ್ಮಿಕರು ಎಂದು ತಿಳಿದು ಬಂದಿದೆ. ಮಹಾರಾಷ್ಟ್ರದ ಪುಣೆ ಮೂಲದವರು ಎನ್ನಲಾಗುತ್ತಿದೆ.
ಹೊನಗನಹಳ್ಳಿ ಗ್ರಾಮದ ಬಳಿ ವೇಗವಾಗಿ ಬಂದ ಲಾರಿ ಹಾಗೂ ಬೊಲೆರೋ ನಡುವೆ ಡಿಕ್ಕಿಯಾಗಿದೆ ಪರಿಣಾಮ ಐವರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರು ಕಾಮಗಾರಿ ನಡೆಸುತ್ತಿರುವ ರಾಜ್ ಗ್ರೂಪ್ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಹೆದ್ದಾರಿ ಕಾಮಗಾರಿಗಾಗಿ ವಿಜಯಪುರಕ್ಕೆ ಬಂದಿದ್ದರು. ಅಪಘಾತದ ಕುರಿತು ರಾಜ್ ಗ್ರೂಪ್ ಕಂಪನಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಈವರೆಗೂ ಪರಿಚಯಸ್ಥರು ಬಾರದ ಹಿನ್ನೆಲೆಯಲ್ಲಿ ಸಾವನ್ನಪ್ಪಿದವರ ಹೆಸರು ತಿಳಿದುಬಂದಿಲ್ಲ.
ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ಆದ್ರೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನ ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಕುರಿತು ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews