ಪಾಟ್ನಾ: ಕುಂಭಮೇಳದಲ್ಲಿ (Kumbh Mela) ಪಾಲ್ಗೊಂಡು ವಾಪಸ್ ಆಗುತ್ತಿದ್ದಾಗ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಐವರು ನೇಪಾಳಿ (Nepalese) ಪ್ರಜೆಗಳು ಸಾವಿಗೀಡಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಕಾರಿನಲ್ಲಿ ಒಂಬತ್ತು ಜನರಿದ್ದರು. ಅವರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ಚನಾ ಠಾಕೂರ್, ಇಂದು ದೇವಿ, ಮಂತರ್ಣಿ ದೇವಿ, ಬಾಲ ಕೃಷ್ಣ ಝಾ ಮತ್ತು ಚಾಲಕ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಮನೋಹರ್ ಠಾಕೂರ್, ಸೃಷ್ಟಿ ಠಾಕೂರ್, ಕಮ್ನಿ ಝಾ ಮತ್ತು ದೇವತರಣ್ ದೇವಿ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬಂಡುಕೋರರ ಜೊತೆ ಗುಂಡಿನ ದಾಳಿ; 18 ಪಾಕ್ ಸೈನಿಕರು ಸಾವು – 23 ಉಗ್ರರ ಹತ್ಯೆ
Advertisement
Advertisement
ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಶನಿವಾರ ಅಪಘಾತ ಸಂಭವಿಸಿದೆ. ಎಲ್ಲರೂ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಪ್ರಯಾಗ್‌ರಾಜ್‌ನಿಂದ ಹಿಂತಿರುಗುತ್ತಿದ್ದರು. ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಮೃತಪಟ್ಟಿದ್ದಾರೆ. ಮಧುಬನಿ ಚತುಷ್ಪಥ ಬೈಪಾಸ್‌ನಲ್ಲಿ ವೇಗವಾಗಿ ಬಂದ ಎಸ್‌ಯುವಿ, ಬೈಕರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಈ ಅವಗಢ ಸಂಭವಿಸಿದೆ.
Advertisement
Advertisement
ವಾಹನದ ಏರ್‌ಬ್ಯಾಗ್‌ಗಳು ತೆರೆದಿಲ್ಲ. ಇದರಿಂದಾಗಿ ಸ್ಥಳದಲ್ಲೇ ಐವರು ಮೃತಪದ್ದಾರೆ. ನಾವು ಇತರ ನಾಲ್ವರನ್ನು ವಾಹನದಿಂದ ರಕ್ಷಿಸಿದ್ದೇವೆ. ಸ್ಥಳೀಯರು ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಕಳುಹಿಸುವಲ್ಲಿ ಸಹಾಯ ಮಾಡಿದ್ದಾರೆ. ಇದನ್ನೂ ಓದಿ: ಕಾರ್ ಡೋರ್‌ಗೆ ಬೈಕ್ ಡಿಕ್ಕಿ – ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್!