ಬೆಂಗಳೂರು: ರಾಜ್ಯದಲ್ಲಿ ಮತ್ತೆ ಹೊಸ 5 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಇದೀಗ ಕರ್ನಾಟಕದಲ್ಲಿ 43ಕ್ಕೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ.
Advertisement
ಈ ಕುರಿತಂತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಅಮೆರಿಕದಿಂದ ರಾಜ್ಯಕ್ಕೆ ಬಂದ 22 ವರ್ಷದ ಯುವತಿ ಮತ್ತು 24 ವರ್ಷದ ಯುವಕ, ದುಬೈನಿಂದ ಬಂದ 53 ವರ್ಷದ ವ್ಯಕ್ತಿ, ಘಾನಾ ದೇಶದಿಂದ ಬಂದ 61 ವರ್ಷದ ವ್ಯಕ್ತಿ ಹಾಗೂ ಮುಂಬೈನಿಂದ ಬಂದ 41 ವರ್ಷದ ವ್ಯಕ್ತಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದೆ.
Advertisement
Five new cases of Omicron confirmed in Karnataka on 29-12-21.
1) 22 yr female, Davanagere (Travelled from USA)
2) 24 yr male, Bengaluru (Returned from USA via Qatar)
3) 53 yr male, Tamilnadu (Arrived at KIAL from Dubai)
4) 61 yr male, Bengaluru (Travelled from Ghana via Doha)
— Dr Sudhakar K (@mla_sudhakar) December 29, 2021
Advertisement
ಸೋಂಕಿತರ ಟ್ರಾವೆಲ್ ಹಿಸ್ಟ್ರಿ ಗಮನಸಿದರೆ ಡಿ.22ರಂದು ಅಮೆರಿಕದಿಂದ ಬೆಂಗಳೂರಿಗೆ ಯುವತಿ ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ನಡೆಸಿದ ವೇಳೆ ಯುವತಿಗೆ ಕೊರೊನಾ ದೃಢಪಟ್ಟಿದೆ. ಅಲ್ಲದೇ ಈ ಯುವತಿ ಎರಡು ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದರು ಎಂದು ತಿಳಿಸಲಾಗಿದೆ. ಯುವತಿ ದಾವಣಗೆರೆ ಮೂಲದವರಾಗಿದ್ದು, ಇದೀಗ ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಮತ್ತೆ ಕೋಟ್ಯಧೀಶನಾದ ಮಲೆ ಮಹದೇಶ್ವರ – ಹುಂಡಿಯಲ್ಲಿ 2.27 ಕೋಟಿ ರೂ. ಸಂಗ್ರಹ
Advertisement
ಅಮೆರಿಕದಿಂದ ಬಂದ ಮತ್ತೋರ್ವ ಯುವಕನಿಗೆ ಡಿಸೆಂಬರ್ 23ರಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಟೆಸ್ಟಿಂಗ್‍ನಲ್ಲಿ ವೇಳೆ ಓಮಿಕ್ರಾನ್ ಪಾಸಿಟಿವ್ ವರದಿಯಾಗಿದೆ. ಎರಡು ಡೋಸ್ ಲಸಿಕೆ ಪಡೆದಿದ್ದ ಬೆಂಗಳೂರು ಮೂಲದ ಯುವಕ ಇದೀಗ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ 6 ಭಯೋತ್ಪಾದಕರ ಹತ್ಯೆ
ದುಬೈನಿಂದ ಬಂದ 53 ವರ್ಷದ ವ್ಯಕ್ತಿ ಡಿಸೆಂಬರ್23ರಂದು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಟೆಸ್ಟಿಂಗ್ ವೇಳೆ ಇವರಿಗೆ ಪಾಸಿಟಿವ್ ಬಂದಿದೆ. ತಮಿಳುನಾಡು ಮೂಲದವರಾಗಿರುವ ಈ ವ್ಯಕ್ತಿ ಸದ್ಯ ತಿರುಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಇಂದು 566 ಪ್ರಕರಣ – ಬೆಂಗಳೂರಿನಲ್ಲಿ 400 ಕೇಸ್, 4 ಸಾವು
5) 41 yr male, Mumbai (Travelled from Mumbai to Bengaluru by flight)
All positive persons have been isolated and primary and secondary contacts have been identified and tested.
— Dr Sudhakar K (@mla_sudhakar) December 29, 2021
ಘಾನಾ ದೇಶದಿಂದ ಬಂದ 61 ವರ್ಷದ ವ್ಯಕ್ತಿ ಡಿಸೆಂಬರ್ 23ರಂದು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು, ವಿಮಾನ ನಿಲ್ದಾಣದಲ್ಲಿ ಇವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಕೊರೊನಾ ಸೋಂಕು ವರದಿಯಾಗಿರಲಿಲ್ಲ. ಆದರೆ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇದೀಗ ಇವರು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂಬೈನಿಂದ ಡಿ.23ರಂದು ಬೆಂಗಳೂರಿಗೆ ಆಗಮಿಸಿದ್ದ 41 ವರ್ಷದ ವ್ಯಕ್ತಿ ಇದೀಗ ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.