ಕಲಬುರಗಿ| ತಡರಾತ್ರಿ ಭೀಕರ ರಸ್ತೆ ಅಪಘಾತಕ್ಕೆ ಐವರು ದುರ್ಮರಣ

Public TV
0 Min Read
kalaburagi accident

ಕಲಬುರಗಿ: ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಸೊನ್ನ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಟೆಂಪೋ ಟ್ರಾವೆಲರ್‌ ಬಂದು ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದ ಪರಿಣಾಮ ಐವರು ಮೃತಪಟ್ಟು, 11 ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article