ರಾಯಚೂರು: ಆಂಧ್ರಪ್ರದೇಶದ ಮಂತ್ರಾಲಯ ಬಳಿ ತುಂಗಭದ್ರಾ ನದಿಯಲ್ಲಿ (Tungabhadra River) ನಿನ್ನೆ ಈಜಲು ತೆರಳಿದ್ದ ಐವರು ನೀರುಪಾಲಾದ ಪ್ರಕರಣದಲ್ಲಿ ಇದುವರೆಗೆ ಮೂವರ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಹೈದರಾಬಾದ್ ಮೂಲದ ತಂದೆ ಮಗನ ಮೃತ ದೇಹಗಳು ಪತ್ತೆಯಾಗಿವೆ. ತಂದೆ ಸತೀಶ್ (35), ಮಗ ಯಮನ ಚಂದ್ರ (5) ಮೃತರು. ನಿನ್ನೆ ಧನುಷ್ (23) ಮೃತದೇಹ ಪತ್ತೆಯಾಗಿತ್ತು. ಇನ್ನೂ ರಾಘವೇಂದ್ರ (25), ಸಂಧ್ಯಾ (23) ನಾಪತ್ತೆಯಾಗಿದ್ದು ಶೋಧ ಕಾರ್ಯ ಮುಂದುವರೆದಿದೆ. ಆಂಧ್ರಪ್ರದೇಶ SDRF, ಪೊಲೀಸರು, ಮೀನುಗಾರರಿಂದ ಶೋಧಕಾರ್ಯ ನಡೆದಿದೆ. ಇದನ್ನೂ ಓದಿ: ಹಾಸನ | ನೇಣುಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ – 4 ಪುಟದ ಡೆತ್‌ನೋಟ್ ಪತ್ತೆ

ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಏರ್ಪಡಿಸಿದ್ದ ಸತ್ಯನಾರಾಯಣ ಪೂಜೆಗೆ ಬಂದಿದ್ದವರು, ಪೂಜೆಯ ಬಳಿಕ ನದಿಯಲ್ಲಿ ಈಜಲು ತೆರಳಿದ್ದ ವೇಳೆ ದುರ್ಘಟನೆ ನಡೆದಿದೆ.
ನದಿಯಲ್ಲಿ ನೀರಿನ ಆಳ ತಿಳಿಯದೇ ಈಜಲು ತೆರಳಿ ನೀರುಪಾಲಾಗಿದ್ದಾರೆ. ಮಂತ್ರಾಲಯಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಮೃತರನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – ಪತ್ನಿಯನ್ನ ಕೊಚ್ಚಿ ಕೊಲೆಗೈದ ಪತಿ
