– ಮೊಬೈಲ್ ಪರಿಶೀಲನೆ ವೇಳೆ ಕೃತ್ಯ ಬೆಳಕಿಗೆ
ತುಮಕೂರು: ಕ್ರಿಮಿನಲ್‍ಗಳಿಗೆ ಪೊಲೀಸ್ ಇಲಾಖೆಯ (Police Department) ಮಾಹಿತಿ ರವಾನಿಸುತ್ತಿದ್ದ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ತುಮಕೂರು (Tumakuru) ಎಸ್ಪಿ ಕೆ.ವಿ ಅಶೋಕ್ ಆದೇಶ ಹೊರಡಿಸಿದ್ದಾರೆ.
ಕ್ಯಾತಸಂದ್ರ ಠಾಣೆಯ ಮಂಜು, ಅಹೋಬಲ ನರಸಿಂಹಮೂರ್ತಿ, ಜಯನಗರ ಠಾಣೆ ಮನು ಎಸ್.ಗೌಡ, ಸಂಚಾರ ಪೊಲೀಸ್ ಠಾಣೆ ರಾಮಕೃಷ್ಣ ಹಾಗೂ ಎಸ್ಪಿ ಕಚೇರಿಯ ಸುರೇಶ್ ಅಮಾನತುಗೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಇದನ್ನೂ ಓದಿ: ಹೆಬ್ಬೆ ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಬಂಡೆ ಮೇಲಿಂದ ಜಾರಿ ಬಿದ್ದು ಯುವಕ ಸಾವು!
ಇವರು ಕ್ರಿಮಿನಲ್‍ಗಳಾದ ಮಂಜುನಾಥ್ ರೆಡ್ಡಿ, ನವೀನ್, ನರಸಿಂಹಮೂರ್ತಿ ಎಂಬವರಿಗೆ ಪೊಲೀಸ್ ಇಲಾಖೆಯ ಮಾಹಿತಿ ಸೋರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಮೂವರು ಆರೋಪಿಗಳ ವಿರುದ್ಧ ದಂಡಿನಶಿವರ ಹಾಗೂ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಚು, ಹಲ್ಲೆ ಆರೋಪದ ಮೇಲೆ ಕೇಸ್ ದಾಖಲಾಗಿತ್ತು. ಈ ವಿಚಾರವಾಗಿ ವಾಟ್ಸಪ್ ಮೂಲಕ ಪೊಲೀಸರೇ ಆರೋಪಿಗಳಿಗೆ ಮಾಹಿತಿ ರವಾನಿಸಿದ್ದರು. ಮಂಜುನಾಥ್ ರೆಡ್ಡಿ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಸ್ಟಡಿ ಅವಧಿ ಅಂತ್ಯ – ಪರಪ್ಪನ ಅಗ್ರಹಾರ ಜೈಲಿಗೆ ಪ್ರಜ್ವಲ್ ಶಿಫ್ಟ್!