ಬೆಂಗಳೂರು: ಆಪರೇಷನ್ ಕಮಲದ ಮೂಲಕ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಮುಂದಾಗಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ರೆಡ್ ಸಿಗ್ನಲ್ ನೀಡಿದೆ. ಈ ಮೂಲಕ ಸಿಎಂ ಕುಮಾರಸ್ವಾಮಿ ನಿರಾಳರಾಗಿದ್ದಾರೆ.
ಪಂಚರಾಜ್ಯ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಈ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ಆಪರೇಷನ್ ಕಮಲ ನಡೆಸದಂತೆ ತಡೆ ಹಿಡಿದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Advertisement
Advertisement
ಹೈಕಮಾಂಡ್ ನಿರ್ಧಾರದಿಂದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಮುಖ್ಯಮಂತ್ರಿಯಾಗುವ ಕನಸು ನನಸಾಗುವ ಸಾಧ್ಯತೆಗಳು ತೀರಾ ಕಡಿಮೆಯಾಗಿದೆ.
Advertisement
ಬಿಜೆಪಿ ಹೈಕಮಾಂಡೇ ರಾಜ್ಯ ನಾಯಕರಿಗೆ ಆಪರೇಷನ್ ಕಮಲ ನಡೆಸದಂತೆ ಹೇಳಿದೆ. ಇದರಿಂದಾಗಿ ಸಿಎಂ ಕುಮಾರಸ್ವಾಮಿ ನಿರಾಳರಾಗಿದ್ದಾರೆ. ಒಂದು ವೇಳೆ ಈ ಚುನಾವಣೆಯಲ್ಲಿ ಜನ ಬಿಜೆಪಿಯ ಕೈ ಹಿಡಿದಿದ್ದರೆ ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯುವ ಸಾಧ್ಯತೆ ಇತ್ತು ಎನ್ನುವ ಮಾತು ಫಲಿತಾಂಶಕ್ಕೆ ಮೊದಲೇ ಹರಿದಾಡುತಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv