ನವದೆಹಲಿ: ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣಾ (Five State Assembly Election) ದಿನಾಂಕ ಘೋಷಣೆಯಾಗಿದೆ. ಮುಂದಿನ ನವೆಂಬರ್ 7 ರಿಂದ 30ರ ವರೆಗೆ ಪಂಚ ರಾಜ್ಯಗಳಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಪಂಚರಾಜ್ಯಗಳ ಚುನಾವಣೆ ಹಿನ್ನೆಲೆ, ಬಿಜೆಪಿ ಹೈಕಮಾಂಡ್ (BJP High Command) ಪಕ್ಷದ ಶಾಸಕರಿಗೆ ಜವಾಬ್ದಾರಿ ಹಂಚಿಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಹಿಳೆಯರನ್ನ ರೇಪ್ ಮಾಡ್ತಿದ್ದಾರೆ, ಮಕ್ಕಳನ್ನ ಕೊಲ್ತಿದ್ದಾರೆ- ಹಮಾಸ್ ಉಗ್ರರ ಕರಾಳ ಮುಖ ಬಿಚ್ಚಿಟ್ಟ ಭಾರತದ ಇಸ್ರೇಲ್ ಮಹಿಳೆ
Advertisement
Advertisement
ಪಕ್ಷದ 40-45 ಶಾಸಕರಿಗೆ ಚುನಾವಣಾ ಜವಾಬ್ದಾರಿ ವಹಿಸಿದ್ದು, ರಾಜ್ಯ ಬಿಜೆಪಿ ಶಾಸಕರು (Karnataka BJP MLAs) ಇಂದಿನಿಂದಲೇ ಪಂಚ ರಾಜ್ಯಗಳಲ್ಲಿ ಪಕ್ಷದ ಅಭ್ಯರ್ಥಿಗಳ ಚುನಾವಣಾ ಕೆಲಸಗಳನ್ನು ನಿರ್ವಹಿಸಲಿದ್ದಾರೆ. ಶಾಸಕ ಮುನಿರತ್ನಗೆ ತೆಲಂಗಾಣ ಚುನಾವಣೆಯಲ್ಲಿ ಕಾರ್ಯನಿರ್ವಹಿಸುವ ಹೊಣೆ ನೀಡಲಾಗಿದ್ದು, ಇಂದು (ಅ.12) ಬೆಳಗ್ಗೆ ತೆಲಂಗಾಣಕ್ಕೆ ತೆರಳಿದ್ದಾರೆ. ಇಂದಿನಿಂದ 10 ದಿನಗಳ ಕಾಲ ಮೊದಲ ಹಂತದಲ್ಲಿ ಚುನಾವಣಾ ಚಟುವಟಿಕೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ಮಾಹಿತಿ ಹಂಚಿಕೊಂಡಿವೆ. ಇದನ್ನೂ ಓದಿ: 10ನೇ ತರಗತಿ ವಿದ್ಯಾರ್ಥಿಯನ್ನ ಸೆಕ್ಸ್‌ಗೆ ಪೀಡಿಸುತ್ತಿದ್ದ ಟೀಚರ್; ಮತಾಂತರಕ್ಕೂ ಒತ್ತಾಯ – ಕೇಸ್ ದಾಖಲು
Advertisement
Advertisement
ನವೆಂಬರ್ 7 ರಂದು ಮಿಜೋರಾಂನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಛತ್ತೀಸಗಢದಲ್ಲಿ ನ.7 ಮತ್ತು ನ.17 ರಂದು ಎರಡು ಹಂತಗಳಲ್ಲಿ ಮತದಾನ ಇರುತ್ತದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯು ನ.17 ರಂದು ಒಂದೇ ಹಂತದಲ್ಲಿ ನಡೆಯಲಿದೆ. ನಂತರ ನ.23 ರಂದು ರಾಜಸ್ಥಾನದಲ್ಲಿ ಮತ್ತು ನ.30 ರಂದು ತೆಲಂಗಾಣದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 3ಕ್ಕೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಇಸ್ರೇಲ್‍ನಿಂದ ಭಾರತೀಯರನ್ನು ಕರೆತರಲು ಅಪರೇಷನ್ ಅಜಯ್ ಆರಂಭಿಸಿದ ಕೇಂದ್ರ ಸರ್ಕಾರ
ಮಿಜೋರಾಂನಲ್ಲಿ 8.52 ಲಕ್ಷ, ಛತ್ತೀಸ್‌ಗಢದಲ್ಲಿ 2.03 ಕೋಟಿ, ಮಧ್ಯಪ್ರದೇಶದಲ್ಲಿ 5.6 ಕೋಟಿ, ರಾಜಸ್ಥಾನದಲ್ಲಿ 5.25 ಕೋಟಿ ಮತ್ತು ತೆಲಂಗಾಣದಲ್ಲಿ 3.17 ಕೋಟಿ ಮತದಾರರಿದ್ದಾರೆ. ಸುಮಾರು 60 ಲಕ್ಷ ಯುವಜನತೆ ಮೊದಲ ಬಾರಿಗೆ (18-19 ವರ್ಷ) 5 ರಾಜ್ಯಗಳ ಚುನಾವಣೆಗಳಲ್ಲಿ ಭಾಗವಹಿಸುತ್ತಾರೆ. ಅರ್ಹತಾ ದಿನಾಂಕಗಳ ತಿದ್ದುಪಡಿಯಿಂದಾಗಿ 15.39 ಲಕ್ಷ ಯುವ ಮತದಾರರು ಚುನಾವಣೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಾಗಿ ಒಟ್ಟು 679 ವಿಧಾನಸಭಾ ಕ್ಷೇತ್ರಗಳಲ್ಲಿ 1.77 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಇದನ್ನೂ ಓದಿ: ಆಮ್ ಆದ್ಮಿಯನ್ನು ಕೊನೆಗಾಣಿಸಲು ಬಿಜೆಪಿ ಅಭಿಯಾನ ಆರಂಭಿಸಿದೆ: ಕೇಜ್ರಿವಾಲ್ ಆರೋಪ
Web Stories