ಅಂದು ಐದು, ಇಂದು ಮೂರೇ ಭಾಷೆ: ಏನಿದು ‘ಇಂಡಿಯನ್ 2’ ಪೋಸ್ಟರ್

Public TV
1 Min Read
Indian 2 1

ಮಲ್ ಹಾಸನ್ (Kamal Haasan) ನಟನೆಯ ಇಂಡಿಯನ್ 2 ಸಿನಿಮಾ ಮೂಲ ಭಾಷೆ ಸೇರಿದಂತೆ ಒಟ್ಟು ಐದು ಭಾಷೆಗಳಲ್ಲಿ ರಿಲೀಸ್ ಮಾಡಲಾಗುವುದು ಎಂದು ಸ್ವತಃ ನಿರ್ಮಾಣ ಸಂಸ್ಥೆಯೇ ಹೇಳಿಕೊಂಡಿತ್ತು. ತಮಿಳು, ತೆಲುಗು, ಕನ್ನಡ, ಹಿಂದಿ, ಮಲಯಾಳಂ ಭಾಷೆಯಲ್ಲಿ ಟ್ರೈಲರ್ ಕೂಡ ರಿಲೀಸ್ ಮಾಡಲಾಗಿತ್ತು. ಆದರೆ, ಇತ್ತೀಚೆಗೆ ರಿಲೀಸ್ ಮಾಡಿರುವ ಪೋಸ್ಟರ್ ನಲ್ಲಿ ಕೇವಲ ಮೂರು ಭಾಷೆ ಮಾತ್ರವಿದೆ. ಹಾಗಾಗಿ ಮೂರು ಭಾಷೆಯಲ್ಲಿ ಮಾತ್ರ ಸಿನಿಮಾ ಬರಲಿದೆಯಾ ಎನ್ನುವ ಪ್ರಶ್ನೆ ಮೂಡಿದೆ.

Indian 2 2

ಇಂಡಿಯನ್ -2 (Indian 2) ಸಿನಿಮಾ ಜೂನ್‌ನಲ್ಲಿ ಬಿಡುಗಡೆಯಾಗಲಿದ್ದು, ಹೀಗಾಗಿ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿದೆ. ಸದ್ಯ ‘ಇಂಡಿಯನ್ 2’ ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿವೆ.

kamal haasan 1

ಇಂಡಿಯನ್ ಸೀಕ್ವೆಲ್‌ಗೆ ಎಸ್.ಶಂಕರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿದೆ. ಚಿತ್ರವನ್ನು ಥಿಯೇಟರ್‌ನಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

kamal haasan

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜೊತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್ (Rakul Preet Singh), ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

 

ಎಸ್. ಶಂಕರ್ (Kamal Haasan) ನಿರ್ದೇಶನದಲ್ಲಿ ‘ಇಂಡಿಯನ್ 2’ ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

Share This Article