ಶಿವಮೊಗ್ಗ: ಕಳೆದ ವರ್ಷ ಲೋಕಾರ್ಪಣೆಗೊಂಡ ಸಿಗಂದೂರು ಸೇತುವೆ (Sigandur Bridge) ಮೇಲೆ ಕರೂರು ಗ್ರಾಮಸ್ಥರು ನಡುರಾತ್ರಿ 12 ಗಂಟೆಗೆ ಧ್ವಜಾರೋಹಣ ಮಾಡಿ ದೇಶಪ್ರೇಮ ಮೆರೆದಿದ್ದಾರೆ.

ಸೇತುವೆ ಮೇಲೆ ತಿರಂಗಾ ಹಿಡಿದು, ಒಂದೇ ಮಾತರಂ ಘೋಷಣೆ ಕೂಗಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೇ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲೂ (Sigandur Temple) ದೇವರ ಬಳಿ ಧ್ವಜ ಇಟ್ಟು ಪೂಜೆ ಸಲ್ಲಿಸಲಾಗಿದೆ. ಈ ಮೂಲಕ ಗ್ರಾಮದಲ್ಲಿ ವಿಶೇಷವಾಗಿ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ. ಇದನ್ನೂ ಓದಿ: ಸಿಗಂದೂರು ಸೇತುವೆಗೆ ಒಂದು ವರ್ಷ – ಪಟಾಕಿ ಸಿಡಿಸಿ ಸ್ಥಳೀಯರ ಸಂಭ್ರಮ
ಸೇತುವೆ ಮೇಲೆ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಭಾಗಿಯಾಗಿದ್ದರು. ದೇವಾಲಯದ ಬಳಿ ನಡೆದ ಕಾರ್ಯಕ್ರಮದಲ್ಲಿ ದೇವಾಲಯದ ಸಿಬ್ಬಂದಿ, ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು.
