ಪಣಜಿ: ಏರ್ ಇಂಡಿಯಾ (Air India) ವಿಮಾನದಲ್ಲಿ (Flight) ಪ್ರಯಾಣಿಕನೊಬ್ಬ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಬೆಳಕಿಗೆ ಬಂದ ಬಳಿಕ ಇದೀಗ ಗೋ ಫಸ್ಟ್ (Go First) ವಿಮಾನದಲ್ಲಿ ಕಿರುಕುಳದ (Harassment) ಇನ್ನೊಂದು ಪ್ರಕರಣ ವರದಿಯಾಗಿದೆ.
ಜನವರಿ 5 ರಂದು ನವದೆಹಲಿಯಿಂದ ಗೋವಾಗೆ ಹೋಗುತ್ತಿದ್ದ ಗೋ ಫಸ್ಟ್ ವಿಮಾನದಲ್ಲಿ ಮಹಿಳಾ ಗಗನಸಖಿಗೆ (Flight Attendant) ವಿದೇಶಿ ಪ್ರಯಾಣಿಕನೊಬ್ಬ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ. ಪ್ರಯಾಣಿಕ ಆಕೆಗೆ ತನ್ನೊಂದಿಗೆ ಕುಳಿತುಕೊಳ್ಳುವಂತೆ ಹೇಳಿ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.
ವರದಿಗಳ ಪ್ರಕಾರ ವ್ಯಕ್ತಿ ಪದೇ ಪದೇ ತನ್ನೊಂದಿಗೆ ಕುಳಿತುಕೊಳ್ಳುವಂತೆ ಪೀಡಿಸಿದ್ದಾನೆ. ಆತ ಈ ವೇಳೆ ಮದ್ಯಪಾನ ಮಾಡಿದ್ದನೋ ಇಲ್ಲವೋ ಎಂಬುದು ತಿಳಿದುಬಂದಿಲ್ಲ. ವಿಮಾನ ಗೋವಾದ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಆತನನ್ನು ವಿಮಾನ ಭದ್ರತಾ ಸಂಸ್ಥೆ ಸಿಐಎಸ್ಎಫ್ಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ (ಡಿಜಿಸಿಎ) ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿ ಶಂಕರ್ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ
ಏರ್ ಇಂಡಿಯಾ ವಿಮಾನದಲ್ಲಿ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಬೆಳಕಿಗೆ ಬಂದಿರುವ ಬೆನ್ನಲ್ಲೇ ಈ ಘಟನೆಯೂ ನಡೆದಿದೆ. ಆದರೆ ಇದು ಬೆಳಕಿಗೆ ಬಂದಿರುವುದು ಮೂತ್ರ ವಿಸರ್ಜನೆ ಮಾಡಿರುವ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಬಳಿಕ.
ನವೆಂಬರ್ 26ರಂದು ಏರ್ ಇಂಡಿಯಾ ವಿಮಾನದಲ್ಲಿ ಆರೋಪಿ ಶಂಕರ್ ಮಿಶ್ರಾ ತನ್ನ ಪ್ಯಾಂಟ್ ಬಿಚ್ಚಿ ವಯಸ್ಸಾದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಆತನ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದೇ ಏರ್ ಇಂಡಿಯಾ ಆತನನ್ನು ಹೋಗಲು ಬಿಟ್ಟಿತ್ತು. ಆದರೆ ಘಟನೆ ಬಗ್ಗೆ ಮಹಿಳೆ ಜನವರಿ 5 ರಂದು ವಿಮಾನಯಾನ ಸಂಸ್ಥೆ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಮಗ್ಗಿ ಹೇಳಿ ವಿಶ್ವ ದಾಖಲೆ ಬರೆದ ಚೈತನ್ಯ ಶಾಲೆ
ಘಟನೆ ಬೆಳಕಿಗೆ ಬರುತ್ತಲೇ ಶಂಕರ್ ಮಿಶ್ರಾ ತಲೆಮರೆಸಿಕೊಳ್ಳಲು ಪ್ರಯತ್ನಿಸಿದ್ದ. ಶುಕ್ರವಾರ ದೆಹಲಿ ಪೊಲೀಸರ ತಂಡ ಆತನನ್ನು ಬೆಂಗಳೂರಿನಲ್ಲಿ ಬಂಧಿಸಿದೆ. ಶನಿವಾರ ಬೆಳಗ್ಗೆ ಆತನನ್ನು ದೆಹಲಿಗೆ ಒಯ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k