ಮುಂಬೈ: ಟಿ20 ವಿಶ್ವಕಪ್ ( T20 World Cup) ವಿಜೇತ ಟೀಂ ಇಂಡಿಯಾ (Team India) ಆಟಗಾರರು ಮುಂಬೈಗೆ ಆಗಮಿಸಿದ ವಿಮಾನಕ್ಕೆ ವಾಟರ್ ಸೆಲ್ಯೂಟ್ ( Water Salute) ಮಾಡಲಾಯಿತು.
ನವದೆಹಲಿಯಿಂದ ಮುಂಬೈಗೆ ಆಟಗಾರರನ್ನು ಕರೆತಂದ ವಿಶೇಷ ವಿಮಾನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ವಿಮಾನಕ್ಕೆ ವಾಟರ್ ಸೆಲ್ಯೂಟ್ ಮಾಡಲಾಯಿತು. ವಿಶ್ವಕಪ್ ಗೆದ್ದ ಟೀಂ ಇಂಡಿಯಾಕ್ಕೆ ಗೌರವ ಸೂಚಕವಾಗಿ ವಿಮಾನ ನಿಲ್ದಾಣದ ಸಿಬ್ಬಂದಿ ಈ ವಿಶೇಷ ಗೌರವವನ್ನು ಏರ್ಪಡಿಸಿದ್ದರು. ಇದನ್ನೂ ಓದಿ: ವಿಶ್ವಕಪ್ ಸಂಭ್ರಮ – ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ
Team India’s flight gets a water salute at airport. pic.twitter.com/b2Xcb6ctCV
— Mufaddal Vohra (@mufaddal_vohra) July 4, 2024
ಇದಕ್ಕೂ ಮುನ್ನ ದೆಹಲಿಯಿಂದ ಮುಂಬೈಗೆ ಹೊರಡುವ ಮುನ್ನ ಟೀಂ ಇಂಡಿಯಾ ಆಟಗಾರರರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದರು. ಈ ವೇಳೆ ಮೋದಿ ಟೀಂ ಇಂಡಿಯಾ ನಾಯಕರಿಗೆ ಅಭಿನಂದಿಸಿ, ಬಳಿಕ ಆಟಗಾರರ ಜೊತೆ ಮಾತುಕತೆ ನಡೆಸಿದ್ದರು.
ಆಟಗಾರರೊಂದಿಗೆ ಮೋದಿ ಮಾತುಕತೆ ನಡೆಸುತ್ತಿರುವ ವೀಡಿಯೋವನ್ನು ಪ್ರಧಾನಿ ಕಾರ್ಯಾಲಯ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಇದರಲ್ಲಿ ಆಟಗಾರರು ಮೋದಿ ಸುತ್ತ ಕುಳಿತು ಚರ್ಚೆಯಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದಿದೆ.
ಜೂ.29 ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ರೋಚಕ 7 ರನ್‍ಗಳ ಜಯ ಸಾಧಿಸಿತ್ತು. ಈ ಮೂಲಕ ಭಾರತ 17 ವರ್ಷಗಳ ನಂತರ ಟಿ 20 ವಿಶ್ವಕಪ್‍ನ್ನು ಗೆದ್ದುಕೊಂಡಿತ್ತು. ಇದನ್ನೂ ಓದಿ: ʻವಿಶ್ವʼ ವಿಜಯಯಾತ್ರೆಗೆ ಕ್ಷಣಗಣನೆ – ಕ್ರಿಕೆಟ್ ಅಭಿಮಾನಿಗಳಿಂದ ʻಮೋದಿ ಮೋದಿʼ ಘೋಷಣೆ!