ಮಂಗಳೂರು: ಮಂಗಳೂರು ಏರ್ಪೋರ್ಟ್ (Mangaluru Airport) ರನ್ ವೇಯಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಮುಂಬೈನಿಂದ ಆಗಮಿಸಿದ ವಿಮಾನ ಲ್ಯಾಂಡ್ ಆಗದೇ ವಾಪಸ್ ಹೋಗಿದೆ.
ವಿದ್ಯುತ್ ವೈಫಲ್ಯದಿಂದ ಮಂಗಳೂರು ಏರ್ಪೋರ್ಟ್‌ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಯಿತು. ರನ್ ವೇ ದೀಪಗಳಲ್ಲಿ ತಾಂತ್ರಿಕ ತೊಂದರೆಯಿಂದ ಲೈಟ್ಸ್ ಆಫ್ ಆಯಿತು. ಇದರಿಂದ ಮುಂಬೈ ವಿಮಾನ ವಾಪಸ್ ಹೋಗಿ ಕೇರಳದ ಕಣ್ಣೂರಿನ ಏರ್ಪೋರ್ಟ್‌ನಲ್ಲಿ ಲ್ಯಾಂಡ್ ಆಗಿದೆ. ಇದನ್ನೂ ಓದಿ: ಕೊಪ್ಪಳದಲ್ಲಿ ಭೀಕರ ಅಪಘಾತಕ್ಕೆ ಕಾರು ಅಪ್ಪಚ್ಚಿ – ಸ್ಥಳದಲ್ಲೇ 6 ಮಂದಿ ದುರ್ಮರಣ
Advertisement
Advertisement
ಎಟಿಸಿ ಸೂಚನೆ ಹಿನ್ನೆಲೆ ಕೇರಳದ ಕಣ್ಣೂರಿಗೆ ವಿಮಾನ ವಾಪಾಸ್ ಆಯಿತು. ತಾಂತ್ರಿಕ ಸಮಸ್ಯೆ ಸರಿಪಡಿಸುವ ವರೆಗೆ ಮಂಗಳೂರು ಏರ್ಪೋರ್ಟ್‌ನಲ್ಲಿ ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿದೆ. ತಾಂತ್ರಿಕ ಸಮಸ್ಯೆ ಸರಿಪಡಿಸಿ ಮತ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಏರ್‌ಪೋರ್ಟ್ ಸಿಬ್ಬಂದಿ ತಾಂತ್ರಿಕ ಸಮಸ್ಯೆ ಸರಿಪಡಿಸುವ ಕೆಲಸ ಕೈಗೊಂಡಿದ್ದಾರೆ.
Advertisement
Advertisement
ಮುಂಬೈನಿಂದ ಬಂದಿದ್ದ ಇಂಡಿಗೋ 6E5188 ವಿಮಾನ ಕಣ್ಣೂರಿಗೆ ಡೈವರ್ಟ್ ಆಯಿತು. ಬಹರೈನ್‌ಗೆ ತೆರಳಬೇಕಿದ್ದ ಏರ್ ಇಂಡಿಯಾ IX 789 ಸಂಚಾರ ವಿಳಂಬವಾಯಿತು. ಚೆನ್ನೈ ಹಾಗೂ ಬೆಂಗಳೂರಿನಿಂದ ಬರಬೇಕಿದ್ದ ವಿಮಾನಗಳ ಲ್ಯಾಂಡಿಂಗ್ ಕೂಡ ವಿಳಂಬವಾಗಿದೆ. ಇದನ್ನೂ ಓದಿ: ನೂತನ ಸಚಿವರಿಗೆ ಟಾರ್ಗೆಟ್ ಕೊಟ್ಟ ಸಿಎಂ