ಕಠ್ಮಂಡು: ಐವರು ಭಾರತೀಯರು ಸೇರಿ 72 ಜನರಿದ್ದ ವಿಮಾನವು ನೇಪಾಳದ ಪೋಖ್ರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇನಲ್ಲೇ ಪತನಗೊಂಡಿದ್ದು, 32 ಮಂದಿ ಮೃತದೇಹಗಳನ್ನ ಹೊರಕ್ಕೆ ತೆಗೆಯಲಾಗಿದೆ.
#WATCH | A passenger aircraft crashed at Pokhara International Airport in Nepal today. 68 passengers and four crew members were onboard at the time of crash. Details awaited. pic.twitter.com/DBDbTtTxNc
— ANI (@ANI) January 15, 2023
Advertisement
ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ಕು ಸಿಬ್ಬಂದಿ ಪ್ರಯಾಣಿಸುತ್ತಿದ್ದ ಯೇತಿ ಏರ್‌ಲೈನ್ಸ್ ವಿಮಾನವು ಇಲ್ಲಿನ ಹಳೆಯ ವಿಮಾನ ನಿಲ್ದಾಣ ಹಾಗೂ ಪೋಖ್ರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ಪತನಗೊಂಡಿದೆ. ವಿಮಾನ ಪತನದ ಸ್ಥಳದಲ್ಲಿ 32 ಮಂದಿಯ ಮೃತದೇಹಗಳನ್ನ ಹೊರತೆಗೆಯಲಾಗಿದೆ. ಇದನ್ನೂ ಓದಿ: ಬಿಗ್ ಬಾಸ್ ನಂದು- ಜಶ್ವಂತ್ ಬ್ರೇಕಪ್‌ಗೆ ಕಾರಣವಾದ್ರಾ ಸಾನ್ಯ ಅಯ್ಯರ್?
Advertisement
Advertisement
ವಿಮಾನವು ರನ್‌ವೇಗೆ ಅಪ್ಪಳಿಸಿದ್ದು, ಅದರ ರಭಸಕ್ಕೆ ಕೂಡಲೇ ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡಿದೆ. ಮುಗಿಲೆತ್ತರ ಚಿಮ್ಮುತ್ತಿದ್ದ ಅಗ್ನಿ ಜ್ವಾಲೆಗಳನ್ನು ನಂದಿಸಲು ರಕ್ಷಣಾ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ರಕ್ಷಣಾ ಕಾರ್ಯಚರಣೆ ಮುಕ್ತಾಯವಾಗುವವರೆಗೂ ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಸಿಬ್ಬಂದಿ ಸೇರಿ 72 ಜನರಿದ್ದ ವಿಮಾನ ನೇಪಾಳದಲ್ಲಿ ಪತನ – ಹೊತ್ತಿ ಉರಿದ ಫ್ಲೈಟ್
Advertisement
ಈ ವಿಮಾನದಲ್ಲಿ 53 ಮಂದಿ ನೇಪಾಳಿಗರು, ಐವರು ಭಾರತೀಯರು, ನಾಲ್ವರು ರಷ್ಯನ್ನರು, ಇಬ್ಬರು ಕೊರಿಯನ್ಸ್, ಅರ್ಜೆಂಟೀನಿಯಾ ಹಾಗೂ ಐರಿಶ್ ದೇಶದ ಒಬ್ಬೊಬ್ಬರು ಪ್ರಯಾಣಿಸುತ್ತಿದ್ದರು.
ತುರ್ತು ಕ್ಯಾಬಿನೆಟ್ ಸಭೆ: ಪೋಖ್ರಾ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ವಿಮಾನ ಅಪಘಾತ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ತುರ್ತು ಕ್ಯಾಬಿನೆಟ್ ಸಭೆ ಕರೆದಿದೆ. ರಕ್ಷಣಾ ಕಾರ್ಯಚರಣೆ ಬಗ್ಗೆ ಚರ್ಚೆಗೆ ತಕ್ಷಣವೇ ಬರುವಂತೆ ಸೂಚನೆ ನೀಡಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k