– ವಿಮಾನ ಹಾರಾಟದಲ್ಲಿ ವ್ಯತ್ಯಯ, ರೆಡ್ ಅಲರ್ಟ್ ಘೋಷಣೆ
ನವದೆಹಲಿ: ದೆಹಲಿ(Delhi) ಮತ್ತು ಎನ್‌ಆರ್‌ಸಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಇಡೀ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿ ಸಂಚಾರ ಅಸ್ತವ್ಯಸ್ತವಾಗಿದೆ.
ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Indira Gandhi International Airport) ಬೀಸಿದ ಬಿರುಗಾಳಿ ಮತ್ತು ಭಾರೀ ಮಳೆಯಿಂದಾಗಿ 100ಕ್ಕೂ ಹೆಚ್ಚು ವಿಮಾನಗಳ ಕಾರ್ಯಾಚರಣೆ ವಿಳಂಬವಾಗಿದೆ. ಅಲ್ಲದೇ ಭಾರೀ ಮಳೆಗೆ 25ಕ್ಕೂ ಹೆಚ್ಚು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ಇದನ್ನೂ ಓದಿ: ಕೋವಿಡ್ ಆತಂಕ – ಬೆಂಗಳೂರಿನ ಮಲ್ಲೇಶ್ವರಂ, ರಾಜಾಜಿನಗರದ ಇಬ್ಬರಿಗೆ ಕೊರೊನಾ ಪಾಸಿಟಿವ್
ದೆಹಲಿಯ ಮೋತಿ ಬಾಗ್, ಮಿಂಟೋ ರಸ್ತೆ, ದೆಹಲಿ ಕಂಟೋನ್ಮೆಂಟ್ ಮತ್ತು ದೀನ್ ದಯಾಳ್ ಉಪಾಧ್ಯಾಯ ಮಾರ್ಗಗಳು ಸಂಪೂರ್ಣ ಜಲಾವೃತವಾಗಿತ್ತು. ಮಹಿಪಾಲಪುರ ಮೇಲ್ಸೇತುವೆಯ ಕೆಳಗೆ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಇದನ್ನೂ ಓದಿ: ಕಾಲುಗಳಿಗೆ ಹಗ್ಗ ಕಟ್ಟಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ
ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳ ಮೇಲೆ ಮಳೆ ಪರಿಣಾಮ ಬೀರಿದೆ. ದೆಹಲಿಯ ಮೇಲಿನ ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಕಾರ್ಯಾಚರಣೆಗಳಲ್ಲಿ ತಾತ್ಕಾಲಿಕ ಅಡಚಣೆ ಉಂಟಾಗಿದೆ ಎಂದು ಇಂಡಿಗೋ(Indigo) ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದೆ. ಇದನ್ನೂ ಓದಿ: ‘ಬ್ರೋಕನ್ ಹಾರ್ಟ್ ಸಿಂಡ್ರೋಮ್’; ಇದು ಹೃದಯದ ಮಾತು – ಪುರುಷರೇ ಜೋಕೆ!
ಇದೀಗ ಭಾರೀ ಮಳೆಗೆ ರಾಜಧಾನಿ ನವದೆಹಲಿ ಸೇರಿ ಹಲವೆಡೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.