ಪ್ರಕೃತಿಯಲ್ಲಿ ಮಳೆ ಆರ್ಭಟ; ಮತೀಯ ಗಲಭೆಯಿಂದ ಸಾವು-ನೋವು ಹೆಚ್ಚಳ – ಕೋಡಿಮಠದ ಶ್ರೀ ಭವಿಷ್ಯ

Public TV
2 Min Read
Kodi mutt Sri 1

ಹಾಸನ: ರಾಜ್ಯದಲ್ಲಿ ಮಳೆಯಿಂದಾಗಿ ಹೆಚ್ಚುತ್ತಿರುವ ಹಾನಿ ಮತ್ತು ಮತೀಯ ಗಲಭೆಯಿಂದ ಉಂಟಾಗುತ್ತಿರುವ ಅಶಾಂತಿ ಬಗ್ಗೆ ಅರಸೀಕೆರೆ ತಾಲ್ಲೂಕಿನ ಶ್ರೀಕ್ಷೇತ್ರ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಶುಭಕೃತ ನಾಮ ಸಂವತ್ಸರದ ಫಲದಲ್ಲಿ ಗುಡುಗು, ಮಿಂಚು, ಗಾಳಿ, ಮಳೆ ಹೆಚ್ಚಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುತ್ತದೆ. ಬಯಲುಸೀಮೆ‌ ಮಲೆನಾಡಾಗುತ್ತದೆ, ಮಲೆನಾಡು ಬಯಲುಸೀಮೆಯಾಗಲು ಬಯಸುತ್ತದೆ. ಇದು ಹೀಗೆಯೇ ಮುಂದುವರಿಯುತ್ತದೆ. ಈ ಸಂವತ್ಸರದ ಫಲ ನೋಡಿದರೆ ಮೇಘ ಘರ್ಜಿಸೀತು, ಭೂಮಿ ತಲ್ಲಣಗೊಂಡೀತು. ಭೂಮಿ ಕಂಪಿಸುತ್ತೆ, ಗುಡ್ಡಗಳು ಕುಸಿಯುತ್ತವೆ, ಕೆರೆ ಕಟ್ಟೆಗಳು ಒಡೆದು ಹೋಗುತ್ತವೆ. ಇದು ಈ ಸಂವತ್ಸರದ ಕಡೆಯವರೆಗೂ ಇರುತ್ತೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹತ್ಯೆಯಾದವರ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಬಾರದು: ಮಂತ್ರಾಲಯ ಶ್ರೀ

KUKKE SUBRHAMANYA

ಮುಂಗಾರು ಮಳೆ ಕಳೆದ ಮೇಲೆ, ಹಿಂಗಾರು ಕಡಿಮೆಯಾಗುತ್ತದೆ. ಆದರೆ ಅಕಾಲಿಕ ಮಳೆಗಳು ಹೆಚ್ಚಾಗುತ್ತವೆ. ಆಶ್ವಿಜ ಕಾರ್ತಿಕದಲ್ಲಿ ದೇಶಕ್ಕೆ ಕಷ್ಟ, ಭಂಗ, ನೋವಿದೆ. ರೋಗರುಜಿನಗಳು ಹೆಚ್ಚುತ್ತವೆ. ಕಳ್ಳಕಾಕರ ಕಾಟ, ಅಪಮೃತ್ಯಗಳು, ಕೊಲೆಗಳು, ಮತೀಯ ಗಲಭೆಗಳು ಹೆಚ್ಚಾಗಿ ಅಂತಾರಾಷ್ಟ್ರೀಯ ವಿಕೋಪಕ್ಕೆ ತುತ್ತಾಗುತ್ತದೆ. ಎಲ್ಲವೂ ಇನ್ನೂ ಇದೆ, ಇನ್ನೂ‌ ಹೆಚ್ಚುತ್ತದೆ ಎಂದು ಹೇಳಿದ್ದಾರೆ.

ರಾಜಕೀಯದಲ್ಲಿ ಕಲಹಗಳಾಗುತ್ತವೆ, ಗುಂಪುಗಳಾಗುತ್ತವೆ. ಮಳೆ ಬರುತ್ತೆ ಬೆಳೆ ಸಿಕ್ಕಲ್ಲ, ಬೆಳೆ ಬರುತ್ತೆ ಅದನ್ನು ಮಳೆ ತಿನ್ನುತ್ತದೆ. ಶುಭಕೃತ ನಾಮ ಸಂವತ್ಸದ ಫಲ ಅಶುಭವಾಗಿರುತ್ತದೆ. ಬಲಾಢ್ಯ ಪೃಥ್ವಿ ಹೆಚ್ಚುತ್ತ ಹೋಗುತ್ತದೆ. ಆಕಾಶ ಎಲ್ಲಿ ಬೇಕು ಅಲ್ಲಿ ಘರ್ಜಿಸುತ್ತೆ ಕಂಡಮಂಡಲ ಆಗುತ್ತೆ. ದೊಡ್ಡ ದೊಡ್ಡ ಪಟ್ಟಣಗಳಿಗೆ ಭಂಗವಾಗುತ್ತೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಭಟ್ಕಳದಲ್ಲಿ ಗುಡ್ಡ ಕುಸಿತ – ನಾಲ್ವರು ಸಾವು, ಮೂವರ ಶವ ಹೊರತೆಗೆದ ರಕ್ಷಣಾ ಸಿಬ್ಬಂದಿ

ಮತೀಯ ಗಲಭೆ ಇನ್ನೂ ಹೆಚ್ಚಾಗುತ್ತೆ. ಸಾವು-ನೋವು ಇನ್ನೂ ಜಾಸ್ತಿ ಆಗಿ ಅಶಾಂತಿ ಉಂಟಾಗಲಿದೆ. ಕಾರ್ತಿಕ ಆಶ್ವಿಜದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಗೊಂದಲಗಳು, ಸಾವು-ನೋವುಗಳು ಆಗುವ ಲಕ್ಷಣ ಬಹಳ ಇದೆ. ಜನ ತಲ್ಲಣಗೊಳ್ಳುತ್ತಾರೆ. ಈ ತಿಂಗಳವರೆಗೂ ಕಾದುನೋಡಿ. ಶುಭಕೃತ ನಾಮ ಸಂವತ್ಸರದಲ್ಲಿ ಶುಭ ಆಗೋದಿಲ್ಲ. ಗಾಳಿ, ಮಳೆ, ವೃಕ್ಷಗಳು ಮುರಿದು ಬೀಳುತ್ತವೆ. ವಿಪರೀತ ಮಿಂಚು ಮತ್ತು ಗಾಳಿಯಾಗುತ್ತದೆ. ಸಾವು-ನೋವು ಹೆಚ್ಚಾಗಲಿದೆ. ಜಲಾಶಯಗಳು ತುಂಬಿ ಹರಿಯುತ್ತವೆ. ಕೆಲವು ಕಡೆ ಮಳೆ ಹೋದರೆ ಸಾಕು ಅಂತಾರೆ, ಕೆಲವು ಕಡೆ ಮಳೆ ಬೇಕು ಅಂತಾರೆ ಎಂದು ಶ್ರೀಗಳು ಭವಿಷ್ಯ ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *