ಡೆಹ್ರಾಡೂನ್: ವರುಣನ ಆರ್ಭಟಕ್ಕೆ ಉತ್ತರಾಖಂಡ್ ನಲುಗಿ ಹೋಗಿದೆ. ಈ ಪ್ರವಾಹದಲ್ಲಿ ಸಾವನ್ನಪ್ಪಿದ ಕುಟುಂಬ ಹಾಗೂ ಮನೆಕಳೆದುಕೊಂಡವರಿಗೆ ಪರಿಹಾರ ನೀಡುವುದಾಗಿ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘೋಷಣೆ ಮಾಡಿದ್ದಾರೆ.
Correction: Those who lost their houses will be given *Rs 1,09,000, Rs 4 lakh compensation to the families of the deceased, possible help to be extended to those who lost their livestock: Uttarakhand CM Pushkar Singh Dhami pic.twitter.com/R9BwmYHvWn
— ANI (@ANI) October 19, 2021
Advertisement
2-3 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡ್ ದಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಹಾಗೂ ಮನೆ ಕಳೆದುಕೊಂಡವರಿಗೆ 1.9 ಲಕ್ಷ ರೂ. ಪರಿಹಾರ ನೀಡುವುದಾಗಿ ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಣೆ ಮಾಡಿದ್ದಾರೆ. ಜಾನುವಾರು ಕಳೆದುಕೊಂಡವರಿಗೆ ಅಗತ್ಯ ನೆರವು ಭರವಸೆಯನ್ನೂ ರಾಜ್ಯ ಸರ್ಕಾರ ನೀಡಿದೆ. ಇದನ್ನೂ ಓದಿ: ಭಾರೀ ಮಳೆಗೆ ಕೊಚ್ಚಿ ಹೋದ ಉತ್ತರಾಖಂಡ್ ರೈಲು ಹಳಿ
Advertisement
So far 34 deaths, 5 missing in #uttarakhandrains. Rs 4 lakh compensation to the families of the deceased, those who lost their houses will be given Rs 1.9 lakhs. Possible help to be extended to those who lost their livestock: Uttarakhand CM Pushkar Singh Dhami pic.twitter.com/J8RhIeC3Jx
— ANI (@ANI) October 19, 2021
Advertisement
ಪ್ರವಾಹದಿಂದ ಮುಳುಗಡೆಯಾಗಿರುವ ಸ್ಥಳಗಳಿಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಉತ್ತರಾಖಂಡ್ ಸರ್ಕಾರ ಪರಿಹಾರ ನೀಡುವುದಾಗಿ ಹೇಳಿದೆ. ಇದನ್ನೂ ಓದಿ: ದೇವಭೂಮಿ ಉತ್ತರಾಖಂಡ್‍ನಲ್ಲಿ ಮೇಘಸ್ಫೋಟ – 12 ಮಂದಿ ಸಾವು, 20 ಮಂದಿ ನಾಪತ್ತೆ
Advertisement
I am visiting the rain-affected areas. Govt putting in all efforts to rescue locals, tourists. PM also extended help, got 3 Air Force helicopters. Weather department has predicted that situation will be better by evening: Uttarakhand CM Pushkar Singh Dhami during an aerial survey pic.twitter.com/sTwPqoEAWz
— ANI (@ANI) October 19, 2021
ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಸಾವಿನ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಪ್ರವಾಹ ಮತ್ತು ಭೂಕುಸಿತದಲ್ಲಿ 5 ಜನರು ನಾಪತ್ತೆಯಾಗಿದ್ದಾರೆ. ಪ್ರಸಿದ್ಧ ಪ್ರವಾಸಿ ಸ್ಥಳವಾಗಿರುವ ನೈನಿತಾಲ್‍ನಲ್ಲಿ ಇಂದು ಮುಂಜಾನೆಯಿಂದ ಸಾಲು ಸಾಲಾಗಿ ಭೂಕುಸಿತವಾಗುತ್ತಿರುವುದರಿಂದ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಉತ್ತರಾಖಂಡ ರಾಜ್ಯದ ಉಳಿದ ಭಾಗಕ್ಕೂ ರಸ್ತೆಸಂಪರ್ಕ ಕಡಿತವಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಮೂರು ಹೆಲಿಕಾಪ್ಟರ್ ಬಳಕೆ ಮಾಡಲಾಗುತ್ತಿದೆ. ಇದನ್ನೂ ಓದಿ: ನಟಿ ಶ್ರೀಲೀಲಾ ನನ್ನ ಮಗಳಲ್ಲ – ವಿವಾದಾತ್ಮಕ ಹೇಳಿಕೆ ಕೊಟ್ಟ ಉದ್ಯಮಿ