-ಸಿಎಂ ಕೇಳಿದ್ದು 38 ಸಾವಿರ ಕೋಟಿ
ಬೆಂಗಳೂರು: ರಾಜ್ಯದಲ್ಲಿ ನೆರೆ ನಷ್ಟ ಅಂದಾಜು 1 ಲಕ್ಷ ಕೋಟಿ ರೂ. ಮೋದಿ ಸರ್ಕಾರ ಎರಡು ಕಂತಗಳಲ್ಲಿ 3,069 ಕೋಟಿ ರೂ. ನೀಡಿದೆ. ಉಳಿದ ಪರಿಹಾರವನ್ನು ಯಾವಾಗ ನೀಡಲಾಗುತ್ತದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಟ್ವಿಟ್ಟರ್ ನಲ್ಲಿ ಎರಡನೇ ಕಂತಿನಲ್ಲಿ 1869.85 ಕೋಟಿ ರೂ. ನೆರೆ ಪರಿಹಾರ ಬಿಡುಗಡೆ ಮಾಡಿರುವ ನರೇಂದ್ರ ಮೋದಿ ಸರ್ಕಾರಕ್ಕೆ ಧನ್ಯವಾದ ತಿಳಿಸಿ, ಪ್ರಶ್ನೆ ಮಾಡಿದ್ದಾರೆ.
ಸಿದ್ದರಾಮಯ್ಯ ಟ್ವೀಟ್: ನೆರೆ ಪರಿಹಾರಕ್ಕಾಗಿ ರೂ.1869 ಕೋಟಿ ಪರಿಹಾರ ನೀಡಿರುವ ನರೇಂದ್ರ ಮೋದಿ ಸರ್ಕಾರಕ್ಕೆ ಧನ್ಯವಾದಗಳು. ಅಂದಾಜು ನೆರೆ ನಷ್ಟ ರೂ.1 ಲಕ್ಷ ಕೋಟಿ. ಸಿಎಂ ಯಡಿಯೂರಪ್ಪ ಸರ್ಕಾರ ಕೇಳಿದ್ದು ರೂ.38 ಸಾವಿರ ಕೋಟಿ ಎರಡು ಕಂತುಗಳಲ್ಲಿ ಕೇಂದ್ರ ನೀಡಿರುವುದು ರೂ.3,069 ಕೋಟಿ. ಉಳಿದದ್ದು ಯಾವಾಗ?
Advertisement
https://twitter.com/siddaramaiah/status/1214448430170329088
Advertisement
ಆಗಸ್ಟ್ ತಿಂಗಳ ನೆರೆಹಾವಳಿಯ ಸಮೀಕ್ಷಾ ವರದಿ ಆಧಾರದಲ್ಲಿ ಸಿಎಂ ಯಡಿಯೂರಪ್ಪನವರು ರೂ.38 ಸಾವಿರ ಕೋಟಿ ಪರಿಹಾರ ಕೇಳಿದ್ದರು. ಅಕ್ಟೋಬರ್ ತಿಂಗಳ ಅತಿವೃಷ್ಟಿಯ ಸಮೀಕ್ಷೆ ಇನ್ನೂ ನಡೆದಿಲ್ಲ. ಅದನ್ನು ತಕ್ಷಣ ಪೂರ್ಣಗೊಳಿಸಿ. ಆ ಸಮೀಕ್ಷಾ ವರದಿಯ ಜೊತೆ ಪರಿಹಾರಕ್ಕಾಗಿ ಪೂರಕ ಬೇಡಿಕೆ ಸಲ್ಲಿಸಬೇಕೆಂದು ಆಗ್ರಹಿಸುತ್ತೇನೆ.
Advertisement
ಸೋಮವಾರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಒಟ್ಟು ಏಳು ರಾಜ್ಯಗಳಿಗೆ ನೆರೆ ಪರಿಹಾರ 5908.56 ಕೋಟಿ ಬಿಡುಗಡೆ ಮಾಡಲಾಗಿದೆ. ಎನ್‍ಡಿಆರ್‍ಎಫ್ ಅಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಎರಡನೇ ಹಂತದಲ್ಲಿ 1869.85 ಕೋಟಿ ನೆರೆ ಪರಿಹಾರ ಬಿಡುಗಡೆ ಮಾಡಿದೆ. ಮೊದಲ ಕಂತಿನಲ್ಲಿ 1200 ಕೋಟಿ ಮಾಡಲಾಗಿತ್ತು. ಒಟ್ಟು ಈವರೆಗೂ 3069.85 ಕೋಟಿ ನೆರೆ ಪರಿಹಾರ ಬಿಡುಗಡೆ ಮಾಡಿದಂತಾಗಿದೆ.
Advertisement
https://twitter.com/siddaramaiah/status/1214449566793134081
ಈ ಪೈಕಿ ಅಸ್ಸಾಂಗೆ 616.63 ಕೋಟಿ, ಹಿಮಾಚಲ ಪ್ರದೇಶಕ್ಕೆ 284.93 ಕೋಟಿ, ಕರ್ನಾಟಕಕ್ಕೆ 1869.85 ಕೋಟಿ, ಮಧ್ಯಪ್ರದೇಶಕ್ಕೆ 1749.73 ಕೋಟಿ, ಮಹಾರಾಷ್ಟ್ರಕ್ಕೆ 956.93 ಕೋಟಿ ಮತ್ತು ತ್ರಿಪುರಕ್ಕೆ 63.32 ಕೋಟಿ ಉತ್ತರ ಪ್ರದೇಶಕ್ಕೆ 367.17 ಕೋಟಿ ಬಿಡುಗಡೆ ಮಾಡಿದೆ.
ರಾಜ್ಯಕ್ಕೆ 1869.85 ಕೋಟಿ ನೆರೆ ಪರಿಹಾರ ಬಿಡುಗಡೆhttps://t.co/NdRa5dYvpN#KarnatakaFlood #FloodRelief #NDRF @BJP4Karnataka @CTRavi_BJP @BSYBJP @INCKarnataka @siddaramaiah @hd_kumaraswamy
— PublicTV (@publictvnews) January 6, 2020