ಮಡಿಕೇರಿ: ಆಗಸ್ಟ್ ತಿಂಗಳಲ್ಲಿ ಕೊಡಗಿನಲ್ಲಿ ಸುರಿದ ಮಳೆ ಮತ್ತು ಪ್ರವಾಹದಿಂದ ಮನೆ ಕೊಚ್ಚಿ ಹೋಗಿ ಎರಡು ತಿಂಗಳಾಯಿತು. ಇನ್ನೂ ಹತ್ತಾರು ಜನರಿಗೆ ಪರಿಹಾರ ಸಿಕ್ಕಿಲ್ಲ. ಮನೆ ಭಾಗಶಃ ಹಾಳಾಗಿದ್ದವರಿಗೆ, ಕಳೆದುಕೊಂಡವರಿಗೆ, ಸರ್ಕಾರದಿಂದ ಸಿಗಬೇಕಾಗಿದ್ದ ತಾತ್ಕಾಲಿಕ 10 ಸಾವಿರ ಪರಿಹಾರ ಇನ್ನೂ ದೊರೆತಿಲ್ಲ.
ಸೋಮವಾರಪೇಟೆ ತಾಲೂಕಿನ ಬೆಟ್ಟದಕಾಡು, ಕುಂಬಾರಗುಂಡಿ, ವಿರಾಜಪೇಟೆ ತಾಲೂಕಿನ ಕರಡಿಗೋಡು, ಹೊಳೆಕೆರೆ ಪೈಸಾರಿ ಸೇರಿದಂತೆ ವಿವಿಧ ಗ್ರಾಮಗಳ 60 ನಿರಾಶ್ರಿತ ಕುಟುಂಬಗಳಿಗೆ 10 ಸಾವಿರ ಪರಿಹಾರವೂ ಸಿಕ್ಕಿಲ್ಲ. ಹೀಗಾಗಿ ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತರಾಗಿರುವ ಜನರಿಗೆ ಮನೆ, ಕೂಲಿಯೂ ಇಲ್ಲ. ಇತ್ತ ಖರ್ಚಿಗೆ ಹಣವೂ ಇಲ್ಲದೆ ಪರದಾಡುವಂತಾಗಿದೆ.
Advertisement
Advertisement
ಆರಂಭದಲ್ಲಿ ಶಾಸಕರು ಅಧಿಕಾರಿಗಳು ಕೇವಲ ಪ್ರಚಾರಕ್ಕೆ ಮಾತ್ರ ತರಾತುರಿಯಲ್ಲಿ ಬಂದು ಚೆಕ್ ಹಂಚಿಕೆ ಮಾಡಿದ್ದರು. ನಂತರ ನಮ್ಮನ್ನು ಯಾರೂ ತಿರುಗಿ ನೋಡುತ್ತಿಲ್ಲ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ.
Advertisement
ಇತ್ತ ಕೊಡಗು ಜಿಲ್ಲಾಧಿಕಾರಿ ಸಂತ್ರಸ್ತರೊಂದಿಗೆ ತಾತ್ಕಾಲಿಕವಾಗಿ ಪರಿಹಾರ ಸಿಗದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಅನೀಸ್ ಕಣ್ಮಿಣಿ ಜಾಯ್, ಎರಡು-ಮೂರು ದಿನಗಳಲ್ಲಿ ಪರಿಹಾರ ವಿತರಿಸುವುದಾಗಿ ಭರವಸೆ ನೀಡಿದ್ದಾರೆ.