Connect with us

Belgaum

ಯಾವುದೇ ವ್ಯವಸ್ಥೆ ಇಲ್ಲದ್ದಕ್ಕೆ ನೆರೆ ಸಂತ್ರಸ್ತರ ಕಣ್ಣೀರು

Published

on

ಬೆಳಗಾವಿ: ಮಲಪ್ರಭಾ ನದಿಗೆ ನವಿಲುತೀರ್ಥ ಡ್ಯಾಂನಿಂದ ಏಕಾಏಕಿ ನೀರು ಬಿಟ್ಟ ಹಿನ್ನೆಲೆಯಲ್ಲಿ ಪ್ರವಾಹಕ್ಕೆ ಸಿಕ್ಕು ಬೀದಿ ಬದಿಯಲ್ಲಿ ವಾಸಿಸುತ್ತಿರುವ ನೆರೆ ಸಂತ್ರಸ್ತರು ಕಣ್ಣೀರು ಹಾಕುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೀರೆಹಂಪಿಹೊಳಿ, ಚಿಕ್ಕಹಂಪಿಹೊಳಿ, ಅವರಾದಿ ಗ್ರಾಮಗಳು ಜಲಾವೃತವಾಗಿದೆ. ಹೀಗಾಗಿ ಊರು ಬಿಟ್ಟು ಬಂದ ನೆರೆ ಸಂತ್ರಸ್ತರು ಕಣ್ಣೀರು ಹಾಕುತ್ತಿದ್ದಾರೆ. ತಾಲೂಕಾಡಳಿತ ಸುರೇಬಾನ್ ಗ್ರಾಮದ ಎಪಿಎಂಸಿ ಮಾರುಕಟ್ಟೆ ಶೆಡ್‍ನಲ್ಲಿ ಪರಿಹಾರ ಕೇಂದ್ರ ತೆರೆದಿದೆ.

ನೆರೆ ಸಂತ್ರಸ್ತರು ತೆರೆದ ಶೆಡ್‍ಗಳಿಗೆ ತಾಡಪತ್ರಿ ಕಟ್ಟಿಕೊಂಡು ಜೀವನ ನಡೆಸುತ್ತಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ಮಳೆ, ಗಾಳಿ ಸೊಳ್ಳೆಗಳ ಕಾಟಕ್ಕೆ ಕಂಗಾಲಾಗಿದ್ದು, ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ನೆರೆ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಯಾವುದೇ ವ್ಯವಸ್ಥೆ ಇಲ್ಲದ್ದಕ್ಕೆ ನೆರೆ ಸಂತ್ರಸ್ತರು ಕಣ್ಣೀರಿಡುತ್ತಿದ್ದು, ಬೇರೆ ಕಡೆಗೆ ಸ್ಥಳಾಂತರ ಮಾಡಿ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸುತ್ತಿದ್ದಾರೆ. ಪ್ರವಾಹ ಬಂದು ಎರಡು ದಿನವಾದರೂ ಶಾಸಕ ಮಹಾದೇವಪ್ಪ ನಮ್ಮ ನೋವನ್ನು ಆಲಿಸುತ್ತಿಲ್ಲ ಎಂದು ಯಾದವಾಡ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.