– 10,000ಕ್ಕೂ ಅಧಿಕ ಮಂದಿ ಸ್ಥಳಾಂತರ
ನವದೆಹಲಿ: ದೆಹಲಿಯಲ್ಲಿ ಉಕ್ಕಿ ಹರಿಯುತ್ತಿರುವ ಯಮುನಾ ನದಿಯಿಂದ ಬರುವ ಪ್ರವಾಹದ (Yamuna flood) ನೀರು ಹತ್ತಿರದ ಪ್ರದೇಶಗಳನ್ನು ಮುಳುಗಿಸಿವೆ. ಅಲ್ಲದೇ ಪ್ರವಾಹದ ನೀರು ದೆಹಲಿ ಸಚಿವಾಲಯಕ್ಕೂ ನುಗ್ಗಿದೆ.
यमुना का जलस्तर लगातार ख़तरे के निशान से ऊपर है। आज यमुना के साथ लगे इलाक़ों का दौरा किया और राहत कैंपों का निरीक्षण किया और बाढ़ प्रभावित लोगों से मुलाक़ात की।
ग्राउंड ज़ीरो पर काम कर रहे सभी लोगों को मेरा सलाम। उम्मीद है #Yamuna की स्तिथि जल्द सामान्य होगी। pic.twitter.com/iwws9dat6j
— Swati Maliwal (@SwatiJaiHind) September 3, 2025
ಅಧಿಕೃತ ಮಾಹಿತಿಯ ಪ್ರಕಾರ, ನಸುಕಿನ ಜಾವ 2 ಗಂಟೆಯಿಂದ 5ರ ವರೆಗೆ ನೀರಿನ ಮಟ್ಟ 207.47 ಮೀಟರ್‌ನಲ್ಲಿ ಸ್ಥಿರವಾಗಿತ್ತು. ಬೆಳಗ್ಗೆ 6 ರಿಂದ 7ರ ವರೆಗೂ 207.48 ಮೀಟರ್‌ನಲ್ಲಿ ನೀರಿನ ಮಟ್ಟ ಇತ್ತು. ಬಳಿಕ ನೀರಿನ ಪ್ರಮಾಣ ಹೆಚ್ಚಾಗಿದ್ದು, ಯಮುನೆಯ ಆಕ್ರೋಶ ಕಟ್ಟೆಯೊಡೆದಂತಾಗಿದೆ. ಇದನ್ನೂ ಓದಿ: ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಮೂತಿಗೆ ಹಕ್ಕಿ ಡಿಕ್ಕಿ
🚨 Gurugram drowns in chaos! water release from #Hathnikund #barrage push #Yamuna above danger mark. #Najafgarh drain backflow floods New Gurugram societies & #Dharmapur village. In Solera Society, water up to gates, waist-deep! #GurugramRains #FloodCrisis… pic.twitter.com/wizR5R6PiM
— Saumya Gupta (@Saumyacritic) September 3, 2025
ದೆಹಲಿ ಮುಖ್ಯಮಂತ್ರಿ (Delhi CM), ಸಂಪುಟ ಸಚಿವರು ಮತ್ತು ಪ್ರಮುಖ ಅಧಿಕಾರಿಗಳ ಕಚೇರಿಗಳನ್ನು ಹೊಂದಿರುವ ದೆಹಲಿ ಸಚಿವಾಲಯದ (Delhi Ministry) ಬಳಿಗೂ ಪ್ರವಾಹ ನೀರು ನುಗ್ಗಿದೆ. ವಾಸುದೇವ್ ಘಾಟ್ ಸುತ್ತಮುತ್ತಲಿನ ಪ್ರದೇಶಗಳು ಸಹ ಜಲಾವೃತಗೊಂಡವು. ಕಾಶ್ಮೀರಿ ಗೇಟ್ ಬಳಿಯ ಶ್ರೀ ಮಾರ್ಗಟ್ ವಾಲೆ ಹನುಮಾನ್ ಬಾಬಾ ಮಂದಿರಕ್ಕೂ ಪ್ರವಾಹ ನೀರು ಆವರಿಸಿದೆ. ಇದನ್ನೂ ಓದಿ: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ – ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶಿಖರ್ ಧವನ್‌ಗೆ ಇಡಿ ಸಮನ್ಸ್
ಕಂದಾಯ ಇಲಾಖೆಯ ಪ್ರಕಾರ, 8,018 ಜನರನ್ನ ಡೇರೆಗಳಿಗೆ ಸ್ಥಳಾಂತರಿಸಲಾಗಿದ್ದು, 2,030 ಜನರನ್ನು 13 ಶಾಶ್ವತ ಆಶ್ರಯಗಳಿಗೆ ಸ್ಥಳಾಂತರಿಸಲಾಗಿದೆ. ಪರಿಸ್ಥಿತಿಯ ಬಗ್ಗೆ ದೆಹಲಿ ಸರ್ಕಾರ 24/7 ನಿಗಾ ಇಡುತ್ತಿದೆ. ಇದನ್ನೂ ಓದಿ: ಇನ್ಮುಂದೆ ಜಿಎಸ್‌ಟಿಯಲ್ಲಿ 2 ಸ್ಲ್ಯಾಬ್ – ಸೆ.22 ರಿಂದ ಜಾರಿ| ಯಾವ ವಸ್ತುಗಳ ಬೆಲೆ ಇಳಿಕೆ? ಯಾವುದು ಏರಿಕೆ? ಇಲ್ಲಿದೆ ಪಟ್ಟಿ