ಬೆಳಗಾವಿ: ಭೀಕರ ಪ್ರವಾಹದ ಸಂದರ್ಭದಲ್ಲಿ ಹಾನಿಯಾದ ಶಾಲೆಗಳ ದುರಸ್ಥಿ ಮಾಡುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕೆಂದು ಜಿಲ್ಲಾ ಪಂಚಾಯತ್ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಗೋರಲ ಒತ್ತಾಯಿಸಿದ್ದಾರೆ.
ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಪ್ರವಾಹದಲ್ಲಿ ಹಾನಿಯಾದ ಶಾಲೆಗಳ ದುರಸ್ಥಿಗೆ ಸರ್ಕಾರ ಅನುಧಾನ ನೀಡಿದರೂ ಅಧಿಕಾರಿಗಳು ಅಭಿವೃದ್ಧಿ ಪಡೆಸಲು ನಿರ್ಲಕ್ಷ್ಯ ತೋರುತ್ತಿದ್ದಾರೆ. ಇಂಥಹ ಅಧಿಕಾರಿಗಳನ್ನು ಅಮಾನತು ಮಾಡಿ ಕ್ರಮ ಜರುಗಿಸಬೇಕೆಂದು ಸಭೆಯಲ್ಲಿ ಆಗ್ರಹಿಸಿದರು.
Advertisement
Advertisement
ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿ.ಪಂ ಸಿಇಒ ರಾಜೇಂದ್ರ ಕೆ.ವಿ ಅವರು, ಪ್ರವಾಹದ ಸಂದರ್ಭದಲ್ಲಿ ಅಧಿಕಾರಿಗಳು ಶ್ರಮಪಟ್ಟು ಕೆಲಸ ಮಾಡಿದ್ದಾರೆ. ಕೆಲವಡೆ ಲೋಪದೋಷವಾಗಿದ್ದರೆ ಖುದ್ದಾಗಿ ಅಧಿಕಾರಿಗಳು ತೆರಳಿ ತಪಾಸಣೆ ಮಾಡಬೇಕು. ಇನ್ನೊಂದು ಬಾರಿ ಹೀಗೆ ದೂರುಗಳು ಬಂದರೆ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
Advertisement
ಕೃಷಿಗೆ ಸಂಬಂಧಿಸಿದಂತೆ ಈಗಾಗಲೇ ಕೃಷಿ ಇಲಾಖೆಯಿಂದ ರೈತರಿಗೆ ಸಲಕರಣೆಗಳನ್ನು ವಿತರಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕೃಷಿ ಇಲಾಖೆಯ ಉಪನಿರ್ದೇಶಕ ಜೆಲಾನಿ ಮುಖಾಶಿ ಸಭೆಯಲ್ಲಿ ತಿಳಿಸಿದರು. ಈ ವೇಳೆ ಜಿ.ಪಂ ಅಧ್ಯಕ್ಷೆ ಆಶಾ ಐಹೊಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.