ಬೆಂಗಳೂರು: ನಾಳೆಯಿಂದ 10 ದಿನಗಳ ಕಾಲ ಲಾಲ್‌ಬಾಗ್‌ನಲ್ಲಿ ಪುಷ್ಪ ಲೋಕ ಅನಾವರಣಗೊಳ್ಳಲಿದೆ. ದಿವಂಗತ ಡಾ.ಪುನೀತ್ ರಾಜ್‌ಕುಮಾರ್ ನೆನಪಿನಾರ್ಥವಾಗಿ ಈ ಬಾರಿ ಫ್ಲವರ್ ಶೋ ನಡೆಯುತ್ತಿದ್ದು, 10 ಲಕ್ಷಕ್ಕೂ ಹೆಚ್ಚು ಹೂವುಗಳಿಂದ ವಿವಿಧ ಆಕೃತಿಗಳನ್ನು ಸಿಂಗರಿಸಲಾಗಿದೆ.
ಗಾಜಿನಮನೆಯಲ್ಲಿ ಮೈಸೂರಿನ ಶಕ್ತಿಧಾಮ, ಗಾಜನೂರು ಮನೆ, ಡಾ.ರಾಜ್, ಡಾ.ಪುನೀತ್ ರಾಜ್‌ಕುಮಾರ್ ಪ್ರತಿಮೆಗಳನ್ನು ಪುಷ್ಪಗಳಲ್ಲಿ ಅರಳಿಸಲಾಗಿದೆ. ನಾಳೆಯಿಂದ ಆಗಸ್ಟ್ 15ರ ವರೆಗೂ ಫಲಪುಷ್ಪ ಪ್ರದರ್ಶನ ಇರಲಿದ್ದು, ಪ್ರತಿದಿನ ನಿತ್ಯ 12 ಗಂಟೆಗಳ ಕಾಲ ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿರಲಿದೆ. ಇದನ್ನೂ ಓದಿ: ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಬೆಳ್ಳಿ ಗೆದ್ದ ಪ್ರಿಯಾ ಮೋಹನ್‍ಗೆ 5 ಲಕ್ಷ ನಗದು ಪುರಸ್ಕಾರ: ನಾರಾಯಣಗೌಡ
Advertisement
ಸಾಮಾನ್ಯ ದಿನಗಳಲ್ಲಿ 70 ರೂಪಾಯಿ, ರಜಾ ದಿನಗಳಲ್ಲಿ 75 ರೂ.ಪಾಯಿ ಪ್ರವೇಶ ಶುಲ್ಕ ಇದೆ ಎಂದು ತೋಟಗಾರಿಕಾ ಇಲಾಖೆ ತಿಳಿಸಿದೆ.