– ಮಳೆ ಹೆಚ್ಚಾದರೆ ವಾಹನಗಳ ಸಂಚಾರ ಬಂದ್ ಸಾಧ್ಯತೆ
ಹಾಸನ: ಭಾರೀ ಮಳೆಗೆ ಫ್ಲೈಓವರ್ ಸ್ಲ್ಯಾಬ್‌ಗಳು (Flyover Slab) ಹಾಗೂ ಮಣ್ಣು ಕುಸಿದಿರುವ ಘಟನೆ ಹಾಸನ (Hassan) ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹಂಗರಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ-373 (National Highway) ಹಾಸನದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಬೇಲೂರು-ಬಿಳಿಕೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಹಂಗರಹಳ್ಳಿ ಬಳಿ ನಿರ್ಮಿಸಲಾಗಿತ್ತು. ಫ್ಲೈಓವರ್ ನಿರ್ಮಾಣ ಹಂತದಲ್ಲಿರುವಾಗಲೇ ಎರಡು ಬಾರಿ ಕುಸಿದಿದ್ದರೂ ಗುತ್ತಿಗೆದಾರ ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡಿರಲಿಲ್ಲ.
Advertisement
Advertisement
ಇದೀಗ ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 3ನೇ ಬಾರಿಗೆ ಫ್ಲೈಓವರ್ ಸ್ಲ್ಯಾಬ್‌ಗಳು ಹಾಗೂ ತಳಪಾಯದ ಮಣ್ಣು ಕುಸಿದಿದೆ. ಪ್ರತಿನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಸಂಪೂರ್ಣ ಫ್ಲೈಓವರ್ ಕುಸಿಯುವ ಆತಂಕ ಎದುರಾಗಿದೆ. ಕಳಪೆ ಕಾಮಗಾರಿಯೇ ಫ್ಲೈಓವರ್ ಕುಸಿಯಲು ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಸವಸಾಗರ ಜಲಾಶಯ ಭರ್ತಿ – ಕೃಷ್ಣಾ ನದಿಗೆ 1.80 ಲಕ್ಷ ಕ್ಯೂಸೆಕ್ ನೀರು ರಿಲೀಸ್
Advertisement
Advertisement
ಮಳೆ ಹೆಚ್ಚಾದರೆ ವಾಹನಗಳ ಸಂಚಾರ ಬಂದ್ ಆಗುವ ಸಾಧ್ಯತೆ ಎದುರಾಗಿದೆ. ಇದನ್ನೂ ಓದಿ: ಉಡುಪಿ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಕೇಸ್ – ಬೆಂಗ್ಳೂರು FSLಗೆ ಮೊಬೈಲ್ ರವಾನೆ
Web Stories