ಬೆಂಗಳೂರು: ಹೊಸ ವರ್ಷಾಚರಣೆಯ (New Year) ಕ್ಷಣಗಣನೆ ಹಿನ್ನೆಲೆ. ಮುಂಜಾಗ್ರತಾ ಕ್ರಮವಾಗಿ ನಗರದ ಎಲ್ಲಾ ಫ್ಲೈಓವರ್‌ಗಳನ್ನು (Flyovers) ಪೊಲೀಸ್ ಇಲಾಖೆ ಬಂದ್ ಮಾಡಿದೆ. ಈ ನಡುವೆ ಎಲೆಕ್ಟ್ರಾನಿಕ್ ಸಿಟಿ (Electronic City Flyover) ಎಲಿವೇಟೆಡ್ ಫ್ಲೈಓವರ್ ಬಂದ್ ಮಾಡಿದ ಕಾರಣ ಪೊಲೀಸರು (Police) ಮತ್ತು ವಾಹನ ಸವಾರರ ನಡುವೆ ವಾಗ್ವಾದ ನಡೆದಿದೆ.
Advertisement
ಈಗಾಗಲೇ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಎಲ್ಲಾ ಫ್ಲೈಓವರ್‌ಗಳನ್ನು ಬಂದ್ ಮಾಡಿದ್ದಾರೆ. ಅದೇ ರೀತಿ ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್‌ಬೋರ್ಡ್ ವರೆಗಿನ 9 ಕಿಲೋಮೀಟರ್ ದೂರದ ಫ್ಲೈಓವರ್ ಕೂಡ ಬಂದ್ ಮಾಡಲಾಗಿದೆ. ಕುಡಿದು ಮೋಜು ಮಸ್ತಿ ಹಿನ್ನೆಲೆ. ರಾತ್ರಿ ವೇಳೆ ಕುಡಿದು ಅತಿವೇಗವಾಗಿ ವಾಹನ ಚಾಲನೆಯಿಂದ ಅಪಘಾತಗಳು ಸಂಭವಿಸುವ ಸಾಧ್ಯತೆಯಿಂದಾಗಿ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ಇದೀಗ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಕ್ಲೋಸ್ ಮಾಡಿದ್ದಕ್ಕೆ ವಾಹನ ಸವಾರರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಯಾವುದೇ ಮಾಹಿತಿ ನೀಡದೆ ಕ್ಲೋಸ್ ಮಾಡಿದ್ದೀರಿ ಎಂದು ಟ್ರಾಫಿಕ್ ಪೊಲೀಸರೊಂದಿಗೆ ಜಟಾಪಟಿ ನಡೆಸಿದ್ದಾರೆ. ಇದನ್ನೂ ಓದಿ: ಹೊಸ ವರ್ಷವನ್ನು ಯಾವ ದೇಶ ಮೊದಲು ಆಚರಿಸುತ್ತೆ ಗೊತ್ತಾ?
Advertisement
Advertisement
ಬೈಕ್ ಸವಾರರಿಗೆ ಫ್ಲೈಓವರ್‌ನಲ್ಲಿ ಸಂಚರಿಸಲು ಅವಕಾಶ ನೀಡುವಂತೆ ಪೊಲೀಸರಿಗೆ ಒತ್ತಾಯಿಸಿದ್ದು, ಟ್ರಾಫಿಕ್ ಪೊಲೀಸರು ನಿರಾಕರಿಸಿದ್ದಾರೆ. ಬಳಿಕ ಹೊಸೂರು ಮುಖ್ಯರಸ್ತೆಯಲ್ಲಿಯೇ ವಾಹನ ಸವಾರರು ಹೊರಟಿದ್ದಾರೆ. ಇದನ್ನೂ ಓದಿ: BREAKING: ರಾಕೇಶ್ ಅಡಿಗಗೆ ಸೆಡ್ಡು ಹೊಡೆದು ಬಿಗ್ ಬಾಸ್ ಕಿರೀಟ ಗೆದ್ದ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ
Advertisement
ಇತ್ತ ಕೋರಮಂಗಲದಲ್ಲಿ ಹೊಸ ವರ್ಷದ ಸಂಭ್ರಮದಲ್ಲಿ ಯುವಕ, ಯುವತಿಯರು ಡಿಜೆ ಸೌಂಡ್‍ಗೆ ಸಖತ್ ಸ್ಟೆಪ್ಸ್ ಹಾಕುತ್ತಿದ್ದಾರೆ. ಸಂಭ್ರಮಾಚರಣೆ ಹಿನ್ನೆಲೆ ಯುವ ಸಮೂಹ ಕುಣಿದು ಕುಪ್ಪಳಿಸುತ್ತಿದೆ.
Live Tv
[brid partner=56869869 player=32851 video=960834 autoplay=true]