ನವದೆಹಲಿ: ಹಣಕಾಸು ಸಚಿವರು ಇಲ್ಲಿಯವರೆಗೆ ಬಜೆಟ್ ಪ್ರತಿಯನ್ನು ಸೂಟ್‍ಕೇಸ್‍ನಲ್ಲಿ ಹೊತ್ತುಕೊಂಡು ಸಂಸತ್ ಪ್ರವೇಶಿಸುತ್ತಿದ್ದರು. ಆದರೆ ನಿರ್ಮಲಾ ಸೀತಾರಾಮನ್ ಅವರು ಈ ಸಂಪ್ರದಾಯಕ್ಕೆ ಬ್ರೇಕ್ ಹಾಕಿ ಕೆಂಪು ಬಣ್ಣದ ಬಟ್ಟೆಯಲ್ಲಿ ಬಜೆಟ್ ಪ್ರತಿಗಳನ್ನು ಇರಿಸಿಕೊಂಡು ಸಂಸತ್ ಪ್ರವೇಶಿಸಿದ್ದಾರೆ.
Advertisement
ಹಣಕಾಸು ಸಚಿವಾಯಕ್ಕೆ ಆಗಮಿಸಿದ ಸಚಿವೆ ಬಜೆಟ್ ದಾಖಲೆಗಳನ್ನು ಬ್ರೀಫ್‍ಕೇಸ್ ಬದಲು ಕೆಂಪು ಬಣ್ಣದ ಬಟ್ಟೆಯಲ್ಲಿ ಬಜೆಟ್ ಪ್ರತಿ ಹಿಡಿದು ಫೋಟೋಗೆ ಪೋಸ್ ಕೊಟ್ಟಿರುವುದು ವಿಶೇಷವಾಗಿತ್ತು. ಈ ವೇಳೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಹಾಗೂ ಹಣಕಾಸು ಸಚಿವಾಲಯದ ಇತರೇ ಅಧಿಕಾರಿಗಳು ಸಚಿವೆಗೆ ಸಾಥ್ ನೀಡಿದ್ದಾರೆ.
Advertisement
ನಿರ್ಮಲಾ ಸೀತಾರಾಮನ್ ಭಾರತದ ಪೂರ್ಣ ಅವಧಿಯ ಮೊದಲ ಮಹಿಳಾ ಹಣಕಾಸು ಮಂತ್ರಿಯಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆಯಾಗಲಿದೆ. ಈ ಬಾರಿ ಕೇಂದ್ರ ಸರ್ಕಾರ ಬಜೆಟ್ ಖರ್ಚನ್ನು ಹೆಚ್ಚಿಸಿ, ತೆರಿಗೆ ವ್ಯವಹಾರಗಳ ಬಗ್ಗೆ ಪ್ರಮುಖ್ಯತೆ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.
Advertisement
Advertisement
ಕೆಂಪುಬಟ್ಟೆಯಲ್ಲಿ ಬಜೆಟ್ ಗೆ ಸಂಬಂಧಪಟ್ಟ ದಾಖಲೆಗಳನ್ನು ಇಟ್ಟು ಆ ಬಟ್ಟೆಯನ್ನು ನಾಲ್ಕು ಮಡಿಕೆ ಮಾಡಿ ರಿಬ್ಬನ್‍ನಿಂದ ಕಟ್ಟಲಾಗಿದೆ. ಅದರ ಮೇಲೆ ರಾಷ್ಟ್ರಲಾಂಛನವಾದ ನಾಲ್ಕು ಮುಖದ ಸಿಂಹದ ಚಿತ್ರವಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಹ್ಮಣಿಯನ್ ಅವರು, ಬಟ್ಟೆಯಲ್ಲಿ ಕಟ್ಟುವುದು ನಮ್ಮ ದೇಶದ ಸಂಪ್ರದಾಯ. ಪಾಶ್ಚಾತ್ಯ ಸಂಸ್ಕೃತಿಯಿಂದ ಹೊರಬರಲು ಈ ಬಾರಿ ಬ್ರೀಫ್‍ಕೇಸ್ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.
Rashtrapati Bhavan: As per tradition, Finance Minister Nirmala Sitharaman calls on President Ramnath Kovind before presenting the Union Budget pic.twitter.com/5vOMn9qj2H
— ANI (@ANI) July 5, 2019
ಸಂಸತ್ ಪ್ರವೇಶಿಸುವ ಮುನ್ನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಸಚಿವೆ ಭೇಟಿಯಾಗಿದ್ದರು. ಬಜೆಟ್ ಮಂಡಿಸಿದ ಬಳಿಕ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಲಿದ್ದು, ಅನುರಾಗ್ ಠಾಕೂರ್, ಹಣಕಾಸು ಸಚಿವಾಲಯದ ಕಾರ್ಯದರ್ಶಿಗಳು ಮತ್ತು ಆರ್ಥಿಕ ಸಲಹೆಗಾರ ಕೆ.ವಿ ಸುಬ್ರಮಣಿಯನ್ ಅವರು ಭಾಗಿಯಾಗಲಿದ್ದಾರೆ.
Chief Economic Advisor Krishnamurthy Subramanian on FM Nirmala Sitharaman keeping budget documents in four fold red cloth instead of a briefcase: It is in Indian tradition. It symbolizes our departure from slavery of Western thought. It is not a budget but a 'bahi khata'(ledger) pic.twitter.com/ZhXdmnfbvl
— ANI (@ANI) July 5, 2019