ಬೆಂಗಳೂರು: ಮೈಸೂರಿನಲ್ಲಿ (Mysuru) ನಡೆಯುತ್ತಿದ್ದ ಭ್ರೂಣ ದಂಧೆ (Foeticide) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಕೇವಲ ಮಾತಾ ಆಸ್ಪತ್ರೆಯಲ್ಲಿ (Matha Hospital) ಮಾತ್ರ ಭ್ರೂಣ ಹತ್ಯೆ ನಡೆಯುತ್ತಿರಲಿಲ್ಲ. ಇದರ ಜೊತೆಗೆ ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ ದಂಧೆ ನಡೆಯುತ್ತಿತ್ತು ಎಂಬ ಸ್ಫೋಟಕ ಮಾಹಿತಿ ಲಭಿಸಿದೆ.
ಮೈಸೂರಿನ ಚಾಮುಂಡೇಶ್ವರಿ ಆಸ್ಪತ್ರೆಯಲ್ಲೂ (Chamundeshwari Hospital) ಕೂಡಾ ಭ್ರೂಣ ಹತ್ಯೆ ದಂಧೆ ನಡೆಯುತ್ತಿದ್ದು, ಇಲ್ಲಿನ ಹೆಡ್‌ನರ್ಸ್ (Head Nurse) ಆಗಿದ್ದ ಉಷಾರಾಣಿ ಎಂಬಾಕೆಯನ್ನು ಬಂಧಿಸಲಾಗಿದೆ. ಬ್ರೋಕರ್ ಪುಟ್ಟರಾಜು ಅಣತಿಯಂತೆ ಮಹಿಳೆಯರಿಗೆ ಅಬಾರ್ಷನ್ ಮಾಡಲಾಗುತ್ತಿತ್ತು. ಪುಟ್ಟರಾಜು ಮಾತಾ ಆಸ್ಪತ್ರೆ ಹಾಗೂ ಚಾಮುಂಡೇಶ್ವರಿ ಆಸ್ಪತ್ರೆಗೆ ಗರ್ಭಿಣಿಯರನ್ನು ಕರೆದುಕೊಂಡು ಹೋಗುತ್ತಿದ್ದ. ಬಳಿಕ ಉಷಾರಾಣಿ ಗರ್ಭಿಣಿಯರಿಗೆ ಅಬಾರ್ಷನ್ (Abortion) ಮಾಡುತ್ತಿದ್ದಳು. ಈ ಹಿನ್ನೆಲೆ ಪೊಲೀಸರು ಉಷಾರಾಣಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಟ್ರಯಲ್ ರೂಮ್‍ನಲ್ಲಿ ಯುವತಿ ಅಶ್ಲೀಲ ಫೋಟೋ ತೆಗೆದು ಬ್ಲ್ಯಾಕ್‍ಮೇಲ್ – ಆರೋಪಿ ಅರೆಸ್ಟ್
Advertisement
Advertisement
ಇನ್ನು ಚಾಮುಂಡೇಶ್ವರಿ ಆಸ್ಪತ್ರೆಯ ಮಾಲೀಕ ಜಗದೀಶ್‌ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಜಗದೀಶ್‌ಗೆ ನೋಟಿಸ್ ನೀಡಿದ್ದಾರೆ. ಅಲ್ಲದೇ ಚಾಮುಂಡೇಶ್ವರಿ ಆಸ್ಪತ್ರೆಯ ದಾಖಲಾತಿಗಳನ್ನು ಪೊಲೀಸರಿಗೆ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಯುವತಿಯ ಹತ್ಯೆಗೈದು ಆಕೆಯ ವಾಟ್ಸಪ್ ಸ್ಟೇಟಸ್‍ಗೆ ಮೃತದೇಹದ ಫೋಟೋ ಹಾಕಿದ ಪಾಗಲ್ ಪ್ರೇಮಿ