ಬಾಗಲಕೋಟೆ: ಜನಪದ ಕಲಾವಿದ, ಚಿತ್ರನಟ ಗುರುರಾಜ ಹೊಸಕೋಟೆ (Gururaj Hosakote) ಅವರ ಕಾರು ಅಪಘಾತಕ್ಕೀಡಾದ ಘಟನೆ ಬಾಗಲಕೋಟೆ (Bagalkote) ಜಿಲ್ಲೆ ಮುಧೋಳ (Mudhol) ತಾಲೂಕಿನ ಸೋರಗಾವಿ ಬಳಿ ನಡೆದಿದೆ.
ಎದುರು ಬಂದ ವಾಹನ ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿದ್ದ ಕಲ್ಲಿಗೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಮೈಸೂರಲ್ಲಿ ಯುವದಸರಾಗೆ ಅದ್ಧೂರಿ ಚಾಲನೆ – ಶ್ರೇಯಾ ಘೋಷಾಲ್ ಹಾಡಿಗೆ ಹುಚ್ಚೆದ್ದು ಕುಣಿದ ಯುವಜನ
ಇನ್ನು ಕಾರಿನಲ್ಲಿದ್ದ ಗುರುರಾಜ ಹೊಸಕೋಟೆ ಅವರು ಪ್ರಾಣಾಪಾದಿಂದ ಪಾರಾಗಿದ್ದು, ಯಾರಿಗೂ ಯಾವುದೇ ಗಾಯ ಹಾಗೂ ಪ್ರಾಣಹಾನಿ ಉಂಟಾಗಿಲ್ಲ. ಸಿಂಧನೂರಿನಿಂದ ಮಹಾಲಿಂಗಪುರಕ್ಕೆ ಹೊರಟಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ದೇವರಾಜ ಅರಸು ಸೇರಿ ಎಲ್ಲಾ ಸಿಎಂಗಳ ಮೇಲೂ ಆಪಾದನೆ ಬಂದಿತ್ತು, ಸಿದ್ದರಾಮಯ್ಯನವರೇ ದೃತಿಗೆಡಬೇಡಿ: ಪಿಜಿಆರ್ ಸಿಂಧ್ಯಾ
ಗುರುರಾಜ ಹೊಸಕೋಟೆ ಕರ್ನಾಟಕ ಜನಪದ ಗಾಯನ, ರಂಗಭೂಮಿ ಮತ್ತು ಸಿನಿಮಾ ಲೋಕದಲ್ಲಿ ಮಹತ್ವದ ಪ್ರತಿಭೆ. ಜನಪದ ಶೈಲಿಯ ಸಮೂಹ ಗೀತೆಗಳನ್ನು ರಚಿಸಿ ಮಾಡುತ್ತಿದ್ದ ನೃತ್ಯ, ಹಾಡಿನ ಸಂಯೋಜನೆ, ಜನಪದ ಶೈಲಿಯ ಹಾಡುಗಳ ರಚನೆ ಮತ್ತು ಹಾಡುಗಾರಿಕೆಯಿಂದ ಅಪಾರ ಪ್ರಸಿದ್ಧಿ ಗಳಿಸಿದ್ದಾರೆ. ಇದನ್ನೂ ಓದಿ: ಮುಂದಿನ ಸಿಎಂ `ಸತೀಶ್ ಜಾರಕಿಹೊಳಿ’ – ಸಚಿವರ ಸಮ್ಮುಖದಲ್ಲೇ ಬೆಂಬಲಿಗನ ಘೋಷಣೆ!