ಅಯೋಧ್ಯೆ: ಅಯೋಧ್ಯೆಯಲ್ಲಿ ನೂತನ ವಿಮಾನ ನಿಲ್ದಾಣ ಹಾಗೂ ಪುನರಾಭಿವೃದ್ಧಿಗೊಂಡಿರುವ ರೈಲು ನಿಲ್ದಾಣ (Ayodhya Railaway Station) ಉದ್ಘಾಟಿಸಲು ಆಗಮಿಸುತ್ತಿರುವ ಶನಿವಾರ (ಇಂದು) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಸ್ವಾಗತಿಸಲು ಅಯೋಧ್ಯೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ಒಂದೆಡೆ ಹೂವು ತೋರಣಗಳ ಅಲಂಕಾರ ಮತ್ತೊಂದೆಡೆ ಸಾಂಸ್ಕೃತಿಕ ಕಲಾ ತಂಡಗಳ ವೈಭವ ಮೆರಗುಗೊಂಡಿದೆ. ವಿವಿಧ ಗೀತೆ, ನೃತ್ಯಗಳಿಗೆ ಹೆಜ್ಜೆಹಾಕುವ ಮೂಲಕ ಪ್ರಧಾನಿಗಳನ್ನ ಬರಮಾಡಿಕೊಳ್ಳಲು ಕಲಾ ತಂಡಗಳು ಕಾದು ಕುಳಿತಿವೆ. ಇದನ್ನೂ ಓದಿ: Ram Mandir Inauguration: ಪ್ರಾಣ ಪ್ರತಿಷ್ಠಾಪನೆಗೆ ಶ್ರೀ ರಾಮಲಲ್ಲಾ ವಿಗ್ರಹ ಆಯ್ಕೆ- ಇಂದು ಅಂತಿಮ ನಿರ್ಣಯ
Advertisement
#WATCH | Folk artists perform in Ayodhya, Uttar Pradesh
PM Narendra Modi will visit Ayodhya today and he will inaugurate the Maharishi Valmiki International Airport Ayodhya Dham, redeveloped Ayodhya Dham Railway Station, and flag off new Amrit Bharat trains and Vande Bharat… pic.twitter.com/7vXfJITcds
— ANI (@ANI) December 30, 2023
Advertisement
ವಿಮಾನ ನಿಲ್ದಾಣದಿಂದ ರೈಲ್ವೆ ನಿಲ್ದಾಣ, ರಾಮ ಪಥ ವರೆಗಿನ ಮಾರ್ಗದಲ್ಲಿ ನಿರ್ಮಿಸಲಾದ ಒಟ್ಟು 40 ವೇದಿಕೆಗಳಲ್ಲಿ 1,400ಕ್ಕೂ ಹೆಚ್ಚು ಕಲಾವಿದರು ಜನಪದ ಕಲೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಪ್ರಸ್ತುತಪಡಿಸಲಿದ್ದಾರೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ನಂತರ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಲಿದ್ದು, 15,700 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: Ram Mandir; ರಾಮಮಂದಿರ ಉದ್ಘಾಟನೆಯ ಕೇಂದ್ರಬಿಂದು ಗರ್ಭಗುಡಿ ವಿಶೇಷತೆ ನಿಮಗೆಷ್ಟು ಗೊತ್ತು?
Advertisement
Advertisement
ಮೋದಿ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ: ಮೋದಿ ಅಯೋಧ್ಯೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ 3 ದಿನಗಳಿಂದ ಭದ್ರತಾ ವ್ಯವಸ್ಥೆಯನ್ನು ಖುದ್ದಾಗಿ ಪರಿಶೀಲಿಸಿದ್ದಾರೆ. ಅಯೋಧ್ಯೆ ಸಂಪೂರ್ಣ ಪೊಲೀಸ್ ಭದ್ರಕೋಟೆಯಾಗಿದೆ. ಡ್ರೋನ್‌ಗಳ ಮೂಲಕವೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಟ್ರಾಫಿಕ್ ನಿಯಂತ್ರಣಕ್ಕೆ ಪ್ರತ್ಯೇಕ ತಂಡ ರಚಿಸಲಾಗಿದೆ. ಈಗಾಗಲೇ ರಾಮನಗರಿಯಲ್ಲಿ ಮೋದಿ ಸ್ವಾಗತಕ್ಕಾಗಿ ತಳಿರು ತೋರಣ, ಹೂವಿನ ಅಲಂಕಾರ, ವರ್ಣರಂಜಿತ ವಿದ್ಯುತ್ ದೀಪಾಲಂಕಾರದಿಂದ ಮಿರಮಿರ ಮಿಂಚುತ್ತಿದೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಲೋಕಾರ್ಪಣೆಯಾಗಲಿರುವ ವಿಶ್ವದರ್ಜೆಯ ವಿಮಾನ, ರೈಲು ನಿಲ್ದಾಣದ ವಿಶೇಷತೆಗಳು ಏನು?
ಅಯೋಧ್ಯೆಯಲ್ಲಿಂದು ಮೋದಿ ಕಾರ್ಯಕ್ರಮಗಳು ಹೇಗಿವೆ?
* ಬೆಳಗ್ಗೆ 10:45ಕ್ಕೆ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
* ಬೆಳಗ್ಗೆ 11:15ಕ್ಕೆ ರೈಲ್ವೆ ನಿಲ್ದಾಣ ಉದ್ಘಾಟನೆ
* 2 ಹೊಸ ಅಮೃತ್ ಭಾರತ್ & 6 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ
* 2183 ಕೋಟಿ ರೂ. ಗ್ರೀನ್‌ಫೀಲ್ಡ್ ಟೌನ್‌ಶಿಪ್‌ಗೆ ಅಡಿಗಲ್ಲು
* 300 ಕೋಟಿ ರೂ. ವಷಿಷ್ಠ ಕುಂಜ್ ವಸತಿ ಯೋಜನೆ
* ನವೀಕರಣಗೊಂಡಿರುವ ನಯಾಘಾಟ್‌ನಿಂದ ಲಕ್ಷ್ಮಣ ಘಾಟ್ ಉದ್ಘಾಟನೆ
( ದೀಪೋತ್ಸವ ಸ್ಥಳ, ಪ್ರವಾಸಿಗರಪಥವಾದ ರಾಮ್ ಕಿ ಪೌಡಿನಿಂದ ರಾಜ್‌ಘಾಟ್, ರಾಜ್‌ಘಾಟ್‌ನಿಂದ ರಾಮ ಮಂದಿರ ರಸ್ತೆ)
* ಅಯೋಧ್ಯೆ ನಗರದಲ್ಲಿ 4 ಹೊಸ ರಸ್ತೆಗಳ ಉದ್ಘಾಟನೆ
* ರಾಮಪಥ, ಭಕ್ತಿಪಥ, ಧರ್ಮಪಥ, ಶ್ರೀರಾಮ ಜನ್ಮಭೂಮಿ ಪಥ (ಜೊತೆಗೆ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ ಲಖನೌ-ಅಯೋಧ್ಯ ಹೈವೇ, ಅಯೋಧ್ಯ ಬೈಪಾಸ್, ವಾರಣಾಸಿ ಬೈಪಾಸ್, ಖುತಾರ್-ಲಖೀಂಪುರ ಹೈವೇ ಸೇರಿವೆ )
* ಮಧ್ಯಾಹ್ನ 12:15ಕ್ಕೆ ಅಯೋಧ್ಯೆ ವಿಮಾನ ನಿಲ್ದಾಣ ಉದ್ಘಾಟನೆ
* ಮಧ್ಯಾಹ್ನ 1 ಗಂಟೆ ಬಳಿಕ ಮೋದಿ ಮೆಗಾ ರೋಡ್ ಶೋ
* ಏರ್‌ಪೋರ್ಟ್‌ನಿಂದ ಅಯೋಧ್ಯೆ ನಗರದಲ್ಲಿ 15 ಕಿ.ಮೀ. ರೋಡ್ ಶೋ