ಮಧ್ಯರಾತ್ರಿ ಕರೆ ಮಾಡಿದ್ರೂ ಸ್ಪಂದಿಸ್ತಿದ್ರು- ರಾಜಾ ವೆಂಕಟಪ್ಪ ನಿಧನಕ್ಕೆ ಅಭಿಮಾನಿಗಳ ಕಂಬನಿ

Public TV
1 Min Read
MLA FOLLOWERS

ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ (Shorapur Assembly Constituency) ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ (MLA Raja Venkatappa) ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ರಾಜಾ ವೆಂಕಟಪ್ಪ ನಾಯಕ ಮನೆ ಮುಂದೆ ಸಾವಿರಾರು ಬೆಂಬಲಿಗರು ಜಮಾಯಿಸಿದ್ದಾರೆ. ಜೊತೆಗೆ ನೆಚ್ಚಿನ ಶಾಸಕರನ್ನ ನೆನೆದು ಕಣ್ಣೀರು ಹಾಕುತ್ತಿದ್ದಾರೆ. ರಾಜಮನೆತನದ ಧಣಿಯನ್ನ ಕಳೆದುಕೊಂಡ ಸುರಪುರದಲ್ಲೀಗ ನೀರವ ಮೌನ ಆವರಿಸಿದೆ.

YADAGIRI RAJA VENKATAPPA

ತಂದೆಯನ್ನ ಕಳೆದುಕೊಂಡಿದ್ದೇವೆ ಎಂದು ಮಹಿಳೆಯರು ಕಣ್ಣೀರು ಹಾಕುತ್ತಿದ್ದಾರೆ. ಮಧ್ಯರಾತ್ರಿ ಕಾಲ್ ಮಾಡಿದರೂ ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿದ್ದರು. ಇದೀಗ ಅವರನ್ನ ಕಳೆದುಕೊಂಡು ಅನಾಥರಾಗಿದ್ದೇವೆ. ನಮ್ಮ ಕಣ್ಣನ್ನೇ ಕಳೆದುಕೊಂಡಿದ್ದೇವೆ ಎಂದು ಅಭಿಮಾನಿಗಳು ಗೋಳಾಡುತ್ತಿದ್ದಾರೆ. ಇದನ್ನೂ ಓದಿ: ಸುರಪುರ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಭಾನುವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ 15 ದಿನಗಳಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆಂಕಟಪ್ಪ ನಾಯಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪೊಲೀಸರ ಕಣ್ತಪ್ಪಿಸಿ ಹುಕ್ಕಾಬಾರ್ ದಂಧೆ – ಸಿಸಿಬಿ ದಾಳಿ ವೇಳೆ ಸಿಕ್ಕಿಬಿದ್ದ ಖದೀಮರು

ಇಂದು ಅಂತ್ಯಕ್ರಿಯೆ: ಇತ್ತ ಶಾಸಕರ ಪುತ್ರ ರಾಜಾ ವೇಣುಗೋಪಾಲ ನಾಯಕ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಬೆಳಗ್ಗೆ ಪಾರ್ಥಿವ ಶರೀರ ಸುರಪುರಕ್ಕೆ ಬಂದಿದೆ. ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನ ಮಾಡಲಾಗುತ್ತದೆ. ಬಳಿಕ 11 ಗಂಟೆಗೆ ಪ್ರಭು ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತೆ ಎಂದರು.

ಸದ್ಯ ಮನೆಯಲ್ಲಿ ಕುಟುಂಬಸ್ಥರು ರಾಜ ಮನೆತನದ ಸಂಪ್ರದಾಯದಂತೆ ಪಾರ್ಥೀವ ಶರೀರಕ್ಕೆ ಪೂಜೆ ಸಲ್ಲಿಸುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಎಸ್‌ಪಿ ಪ್ರಭು ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

Share This Article