LatestLeading NewsMain PostNational

ಬಾಲಕಿಯರ ಕಬಡ್ಡಿ ಪಂದ್ಯಾಟಕ್ಕೆ ಟಾಯ್ಲೆಟ್‌ನಲ್ಲಿ ಊಟ ತಯಾರಿ!

ಲಕ್ನೋ: ಉತ್ತರಪ್ರದೇಶದ (Uttar Pradesh) ಸಹರಾನ್ ಪುರದಲ್ಲಿ ನಡೆದ ಬಾಲಕಿಯರ (Girls) ಕಬಡ್ಡಿ ಟೂರ್ನಿ (Kabaddi Tournament) ವೇಳೆ ಶೌಚಾಲಯದಲ್ಲಿ (Toilet) ಬೇಯಿಸಿದ ಆಹಾರವನ್ನೇ ಕ್ರೀಡಾಪಟುಗಳಿಗೆ ಬಡಿಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

ಶೌಚಾಲಯ ನೆಲದ ಮೇಲೆ ಬೇಯಿಸಿದ ಅನ್ನದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗುತ್ತಿದ್ದಂತೆ ವಿವಾದ ಬುಗಿಲೆದ್ದಿದೆ. ಇದನ್ನೂ ಓದಿ: ರಾಕೇಶ್ ‘ಕಿಸ್’ ಕೊಟ್ಟಿದ್ದು ನಿಜ. ಆದರೆ, ಅದು ಅಮ್ಮನ ಮುತ್ತಿನಂತಿತ್ತು: ಸೋನು ಶ್ರೀನಿವಾಸ್ ಗೌಡ

ಶುಕ್ರವಾರ (ಸೆಪ್ಟೆಂಬರ್ 16) ದಿಂದ ಆರಂಭವಾದ ಮೂರು ದಿನಗಳ ರಾಜ್ಯಮಟ್ಟದ ಅಂಡರ್-17 ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ (Kabaddi Tournament) ಭಾಗವಹಿಸಿದ್ದ ಸುಮಾರು 200 ಕ್ರೀಡಾಪಟುಗಳಿಗೆ ಶೌಚಾಲಯದ ನೆಲದಲ್ಲಿ ಬೇಯಿಸಿದ ಆಹಾರವನ್ನೇ (Food) ನೀಡಲಾಗಿದೆ. ಜೊತೆಗೆ ಒಂದು ಕಾಗದದ ಮೇಲೆ ಪೂರಿಯನ್ನು ಇಡಲಾಗಿತ್ತು. ಅದನ್ನೇ ಆಟಗಾರರಿಗೆ ಬಡಿಸಲಾಗಿದೆ ಎಂದು ಕ್ರೀಡಾಪಟುಗಳು ಆರೋಪಿಸಿದ್ದಾರೆ.

ಈ ಆರೋಪ ತಳ್ಳಿಹಾಕಿರುವ ಕ್ರೀಡಾಧಿಕಾರಿ ಅನಿಮೇಶ್ ಸಕ್ಸೇನಾ ಅವರು, ಇದು ಆಧಾರ ರಹಿತ ಆರೋಪ ಎಂದು ಹೇಳಿದ್ದಾರೆ. ಇದನ್ನೂ ಓದಿ: ಖಾತೆಗಳನ್ನು ಖಾಲಿ ಉಳಿಸಿಕೊಂಡು ಕಾಲಹರಣ ಮಾಡೋ ಬದ್ಲು, ಸಚಿವ ಸ್ಥಾನ ನೀಡಿ: ಬಿಜೆಪಿ MLC

ಇಲ್ಲಿ ಆಟಗಾರರಿಗೆ ನೀಡಲಾಗುವ ಆಹಾರವು ಉತ್ತಮ ಗುಣಮಟ್ಟದ್ದಾಗಿದೆ. ಅಕ್ಕಿ, ದಾಲ್, ಸಬ್ಜಿ ಸೇರಿದಂತೆ ಎಲ್ಲ ರೀತಿಯ ಆಹಾರವನ್ನು ಈಜುಕೊಳದ (Swimming Pool) ಬಳಿಯೇ ಸಾಂಪ್ರದಾಯಿಕ ಇಟ್ಟಿಗೆ ಒಲೆಯಲ್ಲಿ ದೊಡ್ಡ ಪಾತ್ರೆಗಳಲ್ಲಿ ಸಿದ್ಧಪಡಿಸಿ ಕೊಡಲಾಗಿದೆ. ಸ್ಥಳದ ಕೊರತೆಯಿದ್ದರಿಂದಾಗಿ ಕ್ರೀಡಾಂಗಣದ ಪೂಲ್ ಬಳಿಯೇ ಅಡುಗೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಕೆಲ ಆಟಗಾರರು ಕ್ರೀಡಾಂಗಣದ ಅಧಿಕಾರಿಗಳ ಮುಂದೆ ವಿಷಯ ಪ್ರಸ್ತಾಪಿಸಿದ ಬಳಿಕ ಅನಿಮೇಶ್ ಸಕ್ಸೇನಾ ಅಡುಗೆಯವರಿಗೆ ಛೀಮಾರಿ ಹಾಕಿದ್ದು, ಶಿಸ್ತು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Live Tv

Leave a Reply

Your email address will not be published.

Back to top button