ಶಿವಮೊಗ್ಗ: ಫುಡ್ ಪಾಯಿಸನ್‌ನಿಂದ 25ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ.
ನಿನ್ನೆ ಮಧ್ಯಾಹ್ನ ಹಾಸ್ಟೆಲ್‌ನಲ್ಲಿ ಊಟ ಮಾಡಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ವೇಳೆಗೆ ವಾಂತಿ ಬೇಧಿಯಾಗಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿನಿಯರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ದೇವಸ್ಥಾನಕ್ಕೆ ತೆರಳಿ ಹಿಂತಿರುಗುತ್ತಿದ್ದಾಗ ಭೀಕರ ಅಪಘಾತ – ಐವರ ದುರ್ಮರಣ
ಫುಡ್ ಪಾಯಿಸನ್‌ನಿಂದಾಗಿ ಈ ರೀತಿಯಾಗಿದೆ. ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿನಿಯರನ್ನು ಶುಕ್ರವಾರ ಸಂಜೆ ಅಥವಾ ಶನಿವಾರ ಮುಂಜಾನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯ ಸುತ್ತ ಕಂದಕ ತೋಡಿ ಕಾರ್ಮಿಕನಿಗೆ ಹಿಂಸೆ – ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ