– 6 ಮಂದಿ ವಿರುದ್ಧ ಎಫ್‍ಐಆರ್, ನಾಲ್ವರಿಗೆ ಜಾಮೀನು
ತುಮಕೂರು: ನಗರದ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ವಿಷ ಆಹಾರ ಸೇವಿಸಿ ಮಕ್ಕಳ ಸಾವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಸತಿ ಶಾಲೆಯ ಮಾಲೀಕ ಕಿರಣ್ ಕುಮಾರ್, ಪತ್ನಿ ಕವಿತಾ ಕಿರಣ್‍ರನ್ನ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
Advertisement
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸರು ಶನಿವಾರ ರಾತ್ರಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ಮೂರು ದಿನಗಳಿಂದ ಇಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ರು. ಮಾತ್ರವಲ್ಲದೇ ಕಿರಣ್‍ಕುಮಾರ್ ಮತ್ತು ಕವಿತಾ ಇಬ್ಬರನ್ನೂ ಪೊಲೀಸರೇ ರಕ್ಷಣೆ ಮಾಡಿದ್ದರು. ಇದೀಗ ಅವರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
Advertisement
Advertisement
ನಡೆದಿದ್ದೇನು?: ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ವಿಷಯುಕ್ತ ಆಹಾರ ಸೇವಿಸಿ 15 ವರ್ಷದ ಶ್ರೇಯಸ್, ಆಕಾಂಕ್ಷ್ ಪಲ್ಲಕ್ಕಿ ಹಾಗೂ ಶಾಂತಮೂರ್ತಿ ಎಂಬ ಮೂವರು ಅಮಯಾಕ ಮಕ್ಕಳು ಸಾವನಪ್ಪಿದ್ದರು. ಈ ಶಾಲೆ ಬಿಜೆಪಿಯ ಮಾಜಿ ಶಾಸಕ ಕಿರಣ್ ಕುಮಾರ್ ಅವರಿಗೆ ಸೇರಿದ್ದಾಗಿದೆ. ಘಟನೆ ಸಂಬಂಧ ಆರು ಮಂದಿ ವಿರುದ್ದ ಎಫ್.ಐ.ಆರ್ ದಾಖಲಾಗಿತ್ತು. ಇದರಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅದೇ ದಿನ ಕೋರ್ಟ್ ನಾಲ್ವರಿಗೂ ಜಾಮೀನು ನೀಡಿ ಬಿಡುಗಡೆಗೊಳಿಸಿತ್ತು.
Advertisement
ಇತ್ತ ವಿಷಾಹಾರ ಸೇವನೆಯಿಂದ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೆಕ್ಯೂರಿಟಿ ಗಾರ್ಡ್ ರಮೇಶ್ ಘಟನೆ ಬಗ್ಗೆ ಮಾಹಿತಿ ನೀಡಲು ಹಾತೊರೆಯುತ್ತಿದ್ದರು. ಆದ್ರೆ ವೆಂಟಿಲೇಟರ್‍ನಲ್ಲಿ ಅವರು ಉಸಿರಾಡುತ್ತಿದ್ದುದರಿಂದ ಮಾತನಾಡಲು ಸಾಧ್ಯವಾಗದೆ ವೇದನೆ ಅನುಭವಿಸಿದ್ದರು.
ಇದನ್ನೂ ಓದಿ: ತುಮಕೂರು: ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್- 3 ವಿದ್ಯಾರ್ಥಿಗಳ ದುರ್ಮರಣ
ಇದನ್ನೂ ಓದಿ: ತುಮಕೂರು ಶಾಲೆಯಲ್ಲಿ 3 ಮಕ್ಕಳ ಸಾವು ಪ್ರಕರಣ- ಮರಣೋತ್ತರ ಪರೀಕ್ಷೆಯಲ್ಲಿ ವಿಷದಂಶ ಪತ್ತೆ