ಮಂಗಳೂರು: ನರ್ಸಿಂಗ್ ಕಾಲೇಜಿನ (Nursing College) ಹಾಸ್ಟೆಲ್‌ನ 137ಕ್ಕೂ ಹೆಚ್ಚು ವಿದ್ಯಾರ್ಥಿಗಳು ಫುಡ್ ಪಾಯಿಸನ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನಲ್ಲಿ (Mangaluru) ನಡೆದಿದೆ.
ಮಂಗಳೂರು ಹೊರವಲಯದ ಶಕ್ತಿ ನಗರದಲ್ಲಿರುವ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ (City Hospital) ನರ್ಸಿಂಗ್ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಚಿಕನ್, ಗೀರೈಸ್ ತಿಂದು ಫುಡ್ ಪಾಯಿಸನ್ ಆಗಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ನಗರದ ಸಿಟಿ ಆಸ್ಪತ್ರೆ, ಎ.ಜೆ. ಆಸ್ಪತ್ರೆ, ಕೆಎಂಸಿ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಮಗು ಅಪಹರಣಕ್ಕೆ ಮುಸುಕುದಾರಿಗಳು ಯತ್ನ
Advertisement
Advertisement
ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದಾರೆ.
Advertisement
ಫುಡ್ ಪಾಯಿಸನ್ ಆದ ಕಾರಣ ಅವರನ್ನು ದಾಖಲು ಮಾಡಲಾಗಿದೆ. ಆತಂಕ ಪಡುವ ಅಗತ್ಯವಿಲ್ಲ. ಹಾಸ್ಟೆಲ್‌ಗೆ ಭೇಟಿ ನೀಡಿ ವಾರ್ಡನ್ ಜತೆ ಸಂವಾದ ನಡೆಸಿ ಎಲ್ಲವನ್ನೂ ತಿಳಿದುಕೊಳ್ಳುತ್ತೇವೆ. ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕ್ ತಿಳಿಸಿದ್ದಾರೆ. ಇದನ್ನೂ ಓದಿ: ಶೇ.50 ಫೈನ್ ಡಿಸ್ಕೌಂಟ್‍ಗೆ ಫುಲ್ ರೆಸ್ಪಾನ್ಸ್- 3 ದಿನದಲ್ಲಿ 30 ಕೋಟಿ ದಂಡ ವಸೂಲಿ
Advertisement
ಮಧ್ಯರಾತ್ರಿ 2 ಗಂಟೆಯಿಂದ ವಿದ್ಯಾರ್ಥಿಗಳು ಹೊಟ್ಟೆ ನೋವು, ಭೇದಿ, ವಾಂತಿಯಿಂದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ನಾವು ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k