– ನಿಯಮ ಉಲ್ಲಂಘಿಸಿದರೆ ಲೈಸೆನ್ಸ್ ರದ್ದು
– ಜಂಕ್ ಫುಡ್‌ಗಳ ಮೇಲೂ ಅಲರ್ಟ್
ಬೆಂಗಳೂರು: ನಗರದಲ್ಲಿ ಹೋಟೆಲ್‌ಗಳು ಹಾಗೂ ಜಂಕ್ ಫುಡ್‌ಗಳ ಗುಣಮಟ್ಟದ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ದಾಳಿ ಇಂದು ಕೂಡ ಮುಂದುವರಿದಿದೆ. ಬ್ರಿಗೇಡ್ ರೋಡ್ ಸೇರಿದಂತೆ ನಗರದ ಹಲವು ಕಡೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಇಂದು ಕೂಡ ಪ್ರಸಿದ್ಧ ಹೋಟೆಲ್ ಮತ್ತು ರೆಸ್ಟೋರೆಂಟ್ ಸೇರಿದಂತೆ ಹಲವು ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೋಟೆಲ್‌ಗಳಲ್ಲಿ ಸಿದ್ಧಪಡಿಸಲಾಗುತ್ತಿದ್ದ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಲಾಗಿದೆ. ಅನುಮಾನ ಬಂದ ಆಹಾರ ಪದಾರ್ಥಗಳ ಸ್ಯಾಂಪಲ್‌ಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದು, ಅವುಗಳನ್ನು ಲ್ಯಾಬ್‌ಗೆ ಕಳುಹಿಸಲು ಸಿದ್ಧತೆ ನಡೆಸಿದ್ದಾರೆ. ಇಂದು ಬ್ರಿಗೇಡ್ ರೋಡ್‌ನಲ್ಲಿರುವ ಫೇಮಸ್ ಹೋಟೆಲ್‌ಗಳು ಮತ್ತು ಫಾಸ್ಟ್‌ಫುಟ್ ಸೆಂಟರ್‌ಗಳಲ್ಲೂ ಪರಿಶೀಲನೆ ನಡೆಸಲಾಗಿದೆ. ಐವರು ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿ ಆಹಾರ ಮತ್ತು ಮಾಂಸದ ಗುಣಮಟ್ಟವನ್ನು ಪರಿಶೀಲಿಸಿದೆ.
ಹಲವು ಹೋಟೆಲ್‌ಗಳಿಗೆ ನೋಟಿಸ್
ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಶ್ರೀನಿವಾಸ್ ಮಾತನಾಡಿ, ನಿನ್ನೆಯಿಂದಲೇ ನಗರದ ಹೋಟೆಲ್‌ಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಹಲವು ಹೋಟೆಲ್‌ಗಳು ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವುದು ಪರಿಶೀಲನೆ ವೇಳೆ ಕಂಡುಬಂದಿದೆ. ಕೆಲವು ಕಡೆ ಲೇಬಲಿಂಗ್ ಹಾಗೂ ಪ್ಯಾಕೇಜಿಂಗ್ ನಿಯಮಗಳನ್ನು ಪಾಲಿಸದಿರುವುದು ಪತ್ತೆಯಾಗಿದೆ. ಹೀಗಾಗಿ ಸಂಬಂಧಪಟ್ಟ ಹೋಟೆಲ್‌ಗಳಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೌಶಲಗಳನ್ನು ಪಕ್ವ ಮಾಡಿಕೊಳ್ಳಲು, ಬದುಕು ಕಟ್ಟಿಕೊಳ್ಳಲು ಉನ್ನತ ಶಿಕ್ಷಣ ಬೇಕು: ಹೆಚ್.ಆರ್.ರಂಗನಾಥ್
ಇಂದು ನಗರದ ಸುಮಾರು 30 ಕಡೆ ದಾಳಿ ನಡೆಸುವ ಗುರಿ ಇತ್ತು. ಈಗಾಗಲೇ 26 ಕಡೆ ಪರಿಶೀಲನೆ ನಡೆದಿದ್ದು, 11 ಕಡೆ ನೋಟಿಸ್ ನೀಡಲಾಗಿದೆ. ಅಧಿಕಾರಿಗಳು ಹಲವು ಆಹಾರ ಪದಾರ್ಥಗಳ ಸ್ಯಾಂಪಲ್‌ಗಳನ್ನು ಸಂಗ್ರಹಿಸಿದ್ದಾರೆ.
ನಿಯಮ ಉಲ್ಲಂಘಿಸಿದರೆ ಲೈಸೆನ್ಸ್ ರದ್ದು
ಆಹಾರ ಸುರಕ್ಷತಾ ನಿಯಮಗಳನ್ನು ಗಂಭೀರವಾಗಿ ಉಲ್ಲಂಘಿಸಿರುವುದು ಸಾಬೀತಾದರೆ ಪ್ರಾಸಿಕ್ಯೂಷನ್‌ಗೆ ಅವಕಾಶವಿದೆ. ಅಗತ್ಯವಿದ್ದರೆ ಹೋಟೆಲ್‌ನ ಲೈಸೆನ್ಸ್ ರದ್ದು ಮಾಡುವ ಕ್ರಮವೂ ಕೈಗೊಳ್ಳಬಹುದು ಎಂದು ಆಯುಕ್ತ ಶ್ರೀನಿವಾಸ್ ಹೇಳಿದ್ದಾರೆ. ನಗರದಲ್ಲಿ ನಡೆಯುತ್ತಿರುವ ಈ ಕಾರ್ಯಾಚರಣೆಯನ್ನು ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಜಂಕ್ ಫುಡ್‌ಗಳ ಮೇಲೂ ಅಲರ್ಟ್
ನಗರದಲ್ಲಿ ಜಂಕ್ ಫುಡ್ ಸೇವನೆಯಿಂದ ಹಲವು ಆರೋಗ್ಯ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಈ ವಿಚಾರದಲ್ಲೂ ಎಚ್ಚರಿಕೆ ವಹಿಸಿದೆ. ಬ್ರೆಡ್, ಸಾಸ್ ಸೇರಿದಂತೆ ವಿವಿಧ ಆಹಾರ ಪದಾರ್ಥಗಳ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಗುಣಮಟ್ಟ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಲ್ಯಾಬ್ ವರದಿ ಬಂದ ಬಳಿಕ ನಿಯಮ ಉಲ್ಲಂಘಿಸಿರುವುದು ಕಂಡುಬಂದರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಇದನ್ನೂ ಓದಿ: ಕೊಪ್ಪಳದಲ್ಲಿ ಗೃಹಲಕ್ಷ್ಮೀ ಗೋಲ್ಮಾಲ್ ಬಯಲು – ಸತ್ತವರ ಅಕೌಂಟ್‌ಗೆ ಜಮೆಯಾಗಿದ್ದ 86 ಲಕ್ಷ ಹಣ ರಿಕವರಿ



