ರಾಯಚೂರು: ಲಾರಿ ಚಾಲಕನ ನಿರ್ಲಕ್ಷ್ಯದಿಂದಾಗಿ ಲಾರಿ ಪಾದಚಾರಿಗಳ ಮೇಲೆ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಬಳಿ ನಡೆದಿದೆ.
ವಿರುಪಾಕ್ಷಿ (35) ಹುಸೇನಿ (31) ಮೃತ ದುರ್ದೈವಿಗಳು. ಮೇಲೆ ಲಾರಿ ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ. ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಬಳಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಟೂತ್ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿ ಪ್ರಾಣ ಬಿಟ್ಟಳು
ಲಾರಿ ಚಾಲಕ ಮದ್ಯ ಸೇವನೆ ಮಾಡಿ ಲಾರಿ ಚಾಲನೆ ಮಾಡಿದ್ದಾನೆ. ಈತನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಗಾಯಾಳು ಎರಡೂ ಕಾಲುಗಳನ್ನ ಕಳೆದುಕೊಂಡಿದ್ದಾನೆ. ಗಾಯಾಳುವನ್ನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಸ್ಥರು ಚಾಲಕನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!