ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಗ್ರಾಮಾಂತರ ಹಾಗೂ ನಗರ ವ್ಯಾಪ್ತಿಯಲ್ಲಿ ನಿರಂತರ ಗೋವು ಕಳ್ಳತನ ನಡೆಯುತ್ತಿದೆ. ಗೋವುಗಳ ಕಳ್ಳ ಸಾಗಾಣಿಕೆ ತಡೆಯಬೇಕು ಮತ್ತು ಮಾರಿಕಾಂಬಾ ದೇವಸ್ಥಾನದ ಎದುರು ಮಲಗಿದ್ದ ಗೋವು ಕದ್ದೊಯ್ದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಾರಿಕಾಂಬಾ ದೇವಾಲಯದ ಎದುರು ಗೋವಿಗೆ ಪೂಜೆ ಸಲ್ಲಿಸಿ ಮೆರವಣಿಗೆ ಹೊರಟ ಕಾರ್ಯಕರ್ತರು ಮಾರ್ಕೆಟ್ ರಸ್ತೆ ಮಾರ್ಗವಾಗಿ ಬಿ.ಹೆಚ್.ರಸ್ತೆಯ ಶಿವಪ್ಪ ನಾಯಕ ವೃತ್ತ ರಾಷ್ಟೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸುವ ಮೂಲಕ ಗೋವು ಕಳ್ಳರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ರಿಲ್ಯಾಕ್ಸ್ ಮೂಡ್ನಲ್ಲಿರುವ ಹೇಮ ಮಾಲಿನಿ, ಧರ್ಮೇಂದ್ರ
Advertisement
Advertisement
ಸಾಗರ ತಾಲೂಕಿನ ಗ್ರಾಮಾಂತರ ಭಾಗ ಹಾಗೂ ನಗರ ಭಾಗದಲ್ಲಿ ನಡೆಯುತ್ತಿರುವ ಗೋಹತ್ಯೆ ಮತ್ತು ಗೋವು ಕಳ್ಳ ಸಾಗಾಣಿಕೆ ತಡೆಯುವಲ್ಲಿ ಪೆÇಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ.
Advertisement
ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸ್ಥಳೀಯ ನಗರ ಸಭೆಯಲ್ಲಿ ಬಿಜೆಪಿ ಆಡಳಿತವಿದೆ. ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ಹಿಂದೂಗಳನ್ನು ಬಳಸಿಕೊಂಡು, ಹಿಂದುತ್ವ, ಗೋಸಂರಕ್ಷಣೆ ಬಗ್ಗೆ ಮಾತನಾಡುವ ಶಾಸಕರು, ನಗರಸಭೆ ಆಡಳಿತ ಈಗ ಗೋವು ಕಳ್ಳ ಸಾಗಾಣಿಕೆ ನಡೆಯುತ್ತಿದ್ದರೂ ಕ್ರಮ ಕೈಗೊಳ್ಳಲು ಹಿಂದೆ ಸರಿದಿರುವುದು ನಾಚಿಕೆಯ ಸಂಗತಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: KFC ತಿರಸ್ಕರಿಸಿ ಅಭಿಯಾನಕ್ಕೆ ತಮಿಳಿಗರ ಬೆಂಬಲ