ಹಾಸನ: ಬೇಲೂರು ತಾಲೂಕಿನ ಮತ್ತಾವರದ ರೈತ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತನಿಖೆ ವೇಳೆ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ವಿಚಾರ ಬೆಳಕಿಗೆ ಬಂದಿದೆ.
ಕಳೆದ ಜೂನ್ 8 ರಂದು ರೈತ ಯೋಗೇಶ್ (45) ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆದರೆ ಸಾಲದ ಬಾಧೆಯಿಂದ ಗಂಡ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ಪತ್ನಿ ಗಾಯತ್ರಿ ದೂರು ದಾಖಲಿಸಿದ್ದಳು.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪತ್ನಿ ಮತ್ತು ಪುತ್ರ ದರ್ಶನ್ ನ್ನನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಾವೇ ಕೊಲೆ ಮಾಡಿದ್ದಾಗಿ ಸತ್ಯವನ್ನು ಒಪ್ಪಿಕೊಂಡಿದ್ದಾರೆ.
ಆತ್ಮಹತ್ಯೆ ಎಂದು ಬಿಂಬಿಸಿ ಪರಿಹಾರದ ಹಣ ಪಡೆಯಲು ಯೋಗೇಶ್ ಮಲಗಿದ್ದಾಗ ಕತ್ತು ಹಿಸುಕಿ ಕೊಂದಿದ್ದೇವೆ. ನಂತರ ಆತ್ಮಹತ್ಯೆ ಎಂದು ಬಿಂಬಿಸಲು ಕೋಣೆಯಲ್ಲೇ ನೇಣು ಹಾಕಿದ್ದೇವೆ ಎಂದು ವಿಚಾರಣೆಯಲ್ಲಿ ತಿಳಿಸಿದ್ದರು. ಈಗ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.