ಬೆಂಗಳೂರು: ಐದು ಗ್ಯಾರಂಟಿಗಳನ್ನು (Congress Guarantee) ಜಾರಿ ಮಾಡುವುದಾಗಿ ಘೋಷಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ ಈಗ ಆರ್ಥಿಕ ಸಂಪನ್ಮೂಲಗಳನ್ನು ಹೊಂದಿಸಲು ಪ್ರಯತ್ನ ಮಾಡುತ್ತಿದ್ದು, ಅಬಕಾರಿ ಇಲಾಖೆಗೆ (Excise Department) ಈ ಬಾರಿ ಬಿಗ್ ಟಾರ್ಗೆಟ್ ನೀಡಲು ಸರ್ಕಾರ ಮುಂದಾಗಿದೆ.
ಈ ಹಣಕಾಸು ವರ್ಷದಲ್ಲಿ 40 ಸಾವಿರ ಕೋಟಿ ರೂ.ಆದಾಯ ಸಂಗ್ರಹದ ಟಾರ್ಗೆಟ್ ನೀಡಲು ಸಿದ್ದತೆ ನಡೆಸಿದೆ. ಬಿಜೆಪಿ (BJP) ಸರ್ಕಾರ ಮಂಡಿಸಿದ ಬಜೆಟ್‍ನಲ್ಲಿ ಅಬಕಾರಿ ಇಲಾಖೆಯಿಂದ 35 ಸಾವಿರ ಕೋಟಿ ಗುರಿ ನೀಡಲಾಗಿತ್ತು.
- Advertisement -
- Advertisement -
ಇದೇ ವೇಳೆ ಆಸ್ತಿಗಳ ಮಾರ್ಗಸೂಚಿ ದರ ಹೆಚ್ಚಳ ಮಾಡುವ ಸುಳಿವನ್ನು ಕಂದಾಯ ಮಂತ್ರಿ ಕೃಷ್ಣ ಬೈರೇಗೌಡ (Krishna Byre Gowda)ನೀಡಿದ್ದಾರೆ. ಶೀಘ್ರವೇ ಆಸ್ತಿ ಮಾರ್ಗಸೂಚಿ ದರ ಹೆಚ್ಚಳ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಏರ್‌ಬಸ್ ಜೊತೆ ಬರೋಬ್ಬರಿ 500 ವಿಮಾನ ಖರೀದಿಗೆ ಡೀಲ್ – ವಿಶ್ವದಾಖಲೆ ಬರೆದ ಇಂಡಿಗೋ
- Advertisement -
2018 ರಿಂದ ಕರ್ನಾಟಕದಲ್ಲಿ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಆಗಿಲ್ಲ. ಇದರಿಂದ ರೈತರಿಗೂ, ಮಾರಾಟಗಾರರಿಗೂ ಅನ್ಯಾಯ ಆಗುತ್ತಿದೆ. ಶೀಘ್ರವೇ ಮಾರುಕಟ್ಟೆ ದರಕ್ಕೆ ತಕ್ಕಂತೆ ಮಾರ್ಗಸೂಚಿ ದರ ಬದಲಾವಣೆ ಮಾಡುತ್ತೇವೆ ಎಂದಿದ್ದಾರೆ.
- Advertisement -
ಆದಾಯ ಸಂಗ್ರಹದ ಟಾರ್ಗೆಟ್ ಯಾವ ಇಲಾಖೆಗೆ ಎಷ್ಟು ಎನ್ನುವುದು ಜುಲೈನಲ್ಲಿ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್‌ನಲ್ಲಿ ತಿಳಿಯಲಿದೆ.
ಚುನಾವಣಾ ಪ್ರಚಾರದಲ್ಲಿ ಈ ಯೋಜನೆಗಳಿಗೆ ಹಣವನ್ನು ಹೇಗೆ ಹೊಂದಿಸಲಾಗುತ್ತದೆ ಎಂದು ಕೇಳಿದ್ದಕ್ಕೆ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ 40% ಕಮಿಷನ್ ಹಣವನ್ನು ಇದಕ್ಕೆ ವಿನಿಯೋಗಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು.