ಬೆಂಗಳೂರು: ಕನ್ನಡ ಪರ ಹೋರಾಟಗಾರರು ನಡೆಸುತ್ತಿರುವ ಬಂದ್ ಬಿಸಿ ಜನ ಸಾಮನ್ಯರಿಗೆ ತಟ್ಟಿದೆ. ಬೆಂಗಳೂರಿನ ಜೀವನಾಡಿ ಬಿಎಂಟಿಸಿ ಕೂಡ ತನ್ನ ಸಂಚಾರವನ್ನು ರದ್ದುಗೊಳಿಸಿದೆ. ಬೇರೆ ಊರುಗಳಿಂದ ಬೆಂಗಳೂರು ನಗರಕ್ಕೆ ಬಂದ ಜನರು ಬಸ್ ಗಳಿಲ್ಲದೆ ಪರದಾಡುತ್ತಿರುವ ದೃಶ್ಯಗಳು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕಂಡು ಬಂದಿದೆ.
ರಾಜ್ಯದ ಹಲವೆಡೆ ಬಂದ್‍ಗೆ ಬೆಂಬಲ ವ್ಯಕ್ತವಾಗುತ್ತಿದ್ದು, ಬೆಳಗಿನ ಜಾವವೇ ಕನ್ನಡ ಪರ ಹೋರಾಟಗಾರರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಆದ್ರೆ ಮೆಟ್ರೋ ತನ್ನ ಸಂಚಾರವನ್ನು ಎಂದಿನಂತೆ ನಡೆಸುತ್ತಿದೆ. ಎಲ್ಲಾ ಜಿಲ್ಲೆಗಳಲ್ಲಿ ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Advertisement
ನಗರದ ಐಟಿ-ಬಿಟಿ ಕಂಪೆನಿಗಳ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಿನಿಮಾ ಚಿತ್ರೀಕರಣ ಮತ್ತು ಪ್ರದರ್ಶನ, ಹೋಟೆಲ್‍ಗಳು ಸಹ ಬಂದ್ ಆಗಿವೆ. ಕೆಎಸ್‍ಆರ್‍ಟಿಸಿ ಬಸ್‍ಗಳು ಸಹ ಡಿಪೋಗಳಿಂದ ಹೊರ ಬರುತ್ತಿಲ್ಲ.