ಬೆಂಗಳೂರು: ನಗರದ ಹೊರವಲಯ ನೆಲಮಂಗಲ ಪಟ್ಟಣದ ಬಿಎಚ್ ರಸ್ತೆಯಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಲು ಮೈತ್ರಿ ಸರ್ಕಾರದ ಶಾಸಕ ಹಾಗೂ ಸಚಿವರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ.
ರಾಜ್ಯದಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ತಾಲೂಕಿನಲ್ಲಿ, ಬಡವರ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವ ಯೋಜನೆ ತಂದು ಜನರಿಗೆ ಆಸರೆಯಾಗಿದ್ದರು. ಆದ್ರೆ ನಂತರ ಬಂದ ಮೈತ್ರಿ ಸರ್ಕಾರದಲ್ಲಿ ಜೆಡಿಎಸ್ ಶಾಸಕ ಹಾಗೂ ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಸಚಿವರ ಮುಸುಕಿನ ಗುದ್ದಾಟದಿಂದ ಈ ಕ್ಯಾಂಟೀನ್ ಉದ್ಘಾಟನೆಯಾಗದೇ ಜನರ ಆಕ್ರೋಶಕ್ಕೆ ಕಾರಣವಾಗಿದೆ.
Advertisement
Advertisement
ಕಳೆದ ಒಂದು ವರ್ಷದ ಹಿಂದೆ ನೆಲಮಂಗಲದಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿ ಪ್ರಾರಂಭವಾಗಿತ್ತು. ಚುನಾವಣೆ ಪ್ರಾರಂಭದಲ್ಲಿ ಬಿರುಸಿನಿಂದ ಪ್ರಾರಂಭವಾಗಿದ್ದ ಕಾಮಗಾರಿ, ಚುನಾವಣೆ ನಂತರ ಕುಂಟುತ್ತಾ ಸಾಗಿತ್ತು. ಆಮೆಗತಿಯಲ್ಲಿ ನಡೆಯುತ್ತಿದ್ದ ಕಾಮಗಾರಿ 8 ತಿಂಗಳ ನಂತರ ಸಂಪೂರ್ಣವಾಗಿ ಪೂರ್ಣವಾಗಿದೆ. ಅಕ್ಟೋಬರ್ 22ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕಾಂಗ್ರೆಸ್‍ನ ಕೃಷ್ಣಬೈರೇಗೌಡ ಹಾಗೂ ನೆಲಮಂಗಲ ಜೆಡಿಎಸ್ ಶಾಸಕ ಶ್ರೀನಿವಾಸ್‍ಮೂರ್ತಿ ನೇತೃತ್ವದಲ್ಲಿ ಈ ಇಂದಿರಾ ಕ್ಯಾಂಟೀನ್ ಗೆ ಚಾಲನೆ ಸಿಗಬೇಕಿತ್ತು. ಆದ್ರೆ ರಾಜಕಾರಣಿಗಳ ಒಳ ಜಗಳಕ್ಕೆ ಇಂದಿರಾ ಕ್ಯಾಂಟೀನಿಗೆ ಇನ್ನೂ ಉದ್ಘಾಟನೆಯಾಗಿ ಭಾಗ್ಯ ಸಿಕ್ಕಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Advertisement
Advertisement
ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ ಈಗ ರಾಜಕಾರಣಿಗಳ ಜಟಾಪಟಿಗೆ ಬಲಿಯಾಗಿದೆ. ಒಟ್ಟಾರೆ ಅಧಿಕಾರಿಗಳ ಮಾತು ಹಾಗೂ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷ್ಯದಿಂದಾಗಿ, ನೆಲಮಂಗಲದ ಇಂದಿರಾ ಕ್ಯಾಂಟೀನ್ ಪ್ರಾರಂಭದ ನಿರೀಕ್ಷೆ ಮರೆಯುವಂತಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews