ಹೆಚ್ಚು ಹುಡುಗರೊಂದಿಗೆ ಮಾತಾಡ್ತಾಳೆ ಅಂತ ಮಗಳನ್ನೇ ಕೊಂದ ಪೋಷಕರು

Advertisements

ಲಕ್ನೋ: ತಮ್ಮ ಮಗಳು ಹಲವಾರು ಹುಡುಗರೊಂದಿಗೆ ಮಾತನಾಡುತ್ತಾಳೆ ಮತ್ತು ಅಸಭ್ಯವಾಗಿ ವರ್ತಿಸುತ್ತಾಳೆ ಎಂದು ಕೋಪಗೊಂಡ ಪೋಷಕರು ಆಕೆಯನ್ನು ಕಾಲುವೆಗೆ ತಳ್ಳಿ ಹತ್ಯೆಗೈದಿರುವ ಘಟನೆ ಮೀರತ್‍ನಲ್ಲಿ ನಡೆದಿದೆ.

Advertisements

ಈ ಕುರಿತಂತೆ ವಿಚಾರಣೆ ವೇಳೆ ತಮ್ಮ ಮಗಳು “ಹಲವು ಹುಡುಗರೊಂದಿಗೆ ಮಾತನಾಡುತ್ತಿದ್ದಳು ಮತ್ತು ಅಸಭ್ಯ ಸನ್ನೆಗಳನ್ನು ಮಾಡುತ್ತಿದ್ದಳು. ಇದರಿಂದಾಗಿ ಕೋಪಗೊಂಡು ಆಕೆಯನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದೇವೆ ಎಂದು ದಂಪತಿ ಪೊಲೀಸರ ಮುಂದೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಆದರೆ ಬಾಲಕಿಯ ಶವ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೇಶವ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಮಹಾಮಳೆಗೆ ನಲುಗಿದ ರಾಜ್ಯ ರಾಜಧಾನಿ- 100ಕ್ಕೂ ಹೆಚ್ಚು ಮನೆಗೆ ನುಗ್ಗಿದ ನೀರು, ಕೆರೆಯಂತಾದ ರಸ್ತೆಗಳು

Advertisements

ಐದನೇ ತರಗತಿಯಲ್ಲಿ ಓದುತ್ತಿದ್ದ ತಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ಬಬ್ಲೂ ಮತ್ತು ಆತನ ಪತ್ನಿ ರೂಬಿ ಸೆಪ್ಟೆಂಬರ್ 1 ರಂದು ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದರು. ಈ ಘಟನೆ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ಪೋಷಕರೇ ಆರೋಪಿಗಳು ಎಂದು ತಿಳಿದುಬಂದಿದ್ದು ಇದೀಗ ಅವರನ್ನು ಬಂಧಿಸಿದ್ದಾರೆ. ತಮ್ಮ ಮಗಳನ್ನು ಕಾಲುವೆಗೆ ತಳ್ಳಿರುವುದಾಗಿ ದಂಪತಿ ತಪ್ಪೊಪ್ಪಿಕೊಂಡ ಹಿನ್ನೆಲೆ ಸದ್ಯ ಬಾಲಕಿಯ ಶವವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಾಲ್ ಟಿಕೆಟ್ ಸಿಗದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ

Live Tv

Advertisements
Exit mobile version